‘ಆರೋಗ್ಯಕ್ಕೆ ಹಾನಿಕಾರಕ’: ಮದ್ಯದ ಬಾಟಲಿಗಳಲ್ಲಿರುವಂತೆ ಉಪ್ಪಿನ ಪ್ಯಾಕೆಟ್​​ ಮೇಲೂ ಇನ್ನು ಎಚ್ಚರಿಕೆಯ ಸ್ಟಿಕ್ಕರ್​

Edited By:

Updated on: Sep 28, 2026 | 11:24 AM

ಕರ್ನಾಟಕದಲ್ಲಿ ಉಪ್ಪಿನ ಪ್ಯಾಕೆಟ್​ಗಳಿಗೂ ಮಧ್ಯದ ಬಾಟಲಿಯ ಮಾದರಿಯಲ್ಲಿ ಆರೋಗ್ಯ ಎಚ್ಚರಿಕೆಗಳನ್ನು ಕಡ್ಡಾಯಗೊಳಿಸಲು ಸರಕಾರ ಚಿಂತನೆ ನಡೆಸಿದೆ. ಅತಿಯಾದ ಉಪ್ಪು ಸೇವನೆಯನ್ನು ನಿಯಂತ್ರಿಸುವುದು ಮತ್ತು ಜನರಲ್ಲಿ ಆರೋಗ್ಯ ಜಾಗೃತಿ ಮೂಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು, ಆರೋಗ್ಯಕ್ಕೆ ಪೂರಕವಾದ ಉಪ್ಪಿನ ಬಳಕೆಗೆ ಒತ್ತು ನೀಡಲಾಗುವುದು ಎಂದಿದ್ದಾರೆ.

ಬೆಂಗಳೂರು, ಸೆಪ್ಟೆಂಬರ್​​ 23: ಕರ್ನಾಟಕದಲ್ಲಿ ಉಪ್ಪಿನ ಪ್ಯಾಕೆಟ್‌ಗಳ ಮೇಲೆ “ಆರೋಗ್ಯಕ್ಕೆ ಹಾನಿಕರ” ಎಂಬ ಎಚ್ಚರಿಕೆ ಸ್ಟಿಕ್ಕರ್‌ಗಳನ್ನು ಕಡ್ಡಾಯಗೊಳಿಸಲು ರಾಜ್ಯ ಸರಕಾರ ಮಹತ್ವದ ಹೆಜ್ಜೆ ಇಡುತ್ತಿದೆ. ಮದ್ಯದ ಬಾಟಲಿಗಳ ಮೇಲೆ ಇರುವಂತಹ ಎಚ್ಚರಿಕೆಗಳ ಮಾದರಿಯಲ್ಲೇ ಈ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ಬೆಂಗಳೂರಿನಲ್ಲಿ ಘೋಷಿಸಿದ್ದಾರೆ. ಉಪ್ಪು ಮತ್ತು ಸಕ್ಕರೆಯ ಅತಿಯಾದ ಸೇವನೆಯು ಅನೇಕ ರೋಗಗಳಿಗೆ ಪ್ರಮುಖ ಕಾರಣವಾಗಿದೆ. ಹಿಂದೆ ಸರಕಾರದಿಂದ ಸಬ್ಸಿಡಿಯಲ್ಲಿ ಉಪ್ಪು-ಸಕ್ಕರೆ ವಿತರಿಸಲಾಗುತ್ತಿತ್ತು, ಆದರೆ ತಾನು ಆಹಾರ ಸಚಿವನಾಗಿದ್ದಾಗ ಅದನ್ನು ನಿಲ್ಲಿಸಿದ್ದೇನೆ ಎಂದು ಖಾದರ್ ಹೇಳಿದ್ದಾರೆ. ಜನರಿಗೆ ಉಪ್ಪಿನ ಸರಿಯಾದ ಬಳಕೆಯ ಅರಿವು ಮೂಡಿಸುವುದು ಮತ್ತು ಆರೋಗ್ಯಕರ ಉಪ್ಪಿನ ಉತ್ಪಾದನೆಗೆ ಒತ್ತು ನೀಡುವುದು ಈ ಕ್ರಮದ ಹಿಂದಿರುವ ಮುಖ್ಯ ಉದ್ದೇಶ ಎಂದವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

 

 

Published on: Sep 23, 2026 12:32 PM
Loading...
Unable to load recommendations.
Follow Us
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More