VIDEO: ಬ್ರೂಕ್ ಬೂಮ್ ಬೂಮ್… ವಾಟ್ ಎ ಶಾಟ್
ಈ ಪಂದ್ಯದಲ್ಲಿ 14 ಎಸೆತಗಳನ್ನು ಎದುರಿಸಿದ ಬ್ರೂಕ್ ಅಜೇಯ 31 ರನ್ ಬಾರಿಸಿದರು. ಈ ಮೂಲಕ ನಾರ್ಥನ್ ಸೂಪರ್ ಚಾರ್ಜರ್ಸ್ ತಂಡವು 100 ಎಸೆತಗಳಲ್ಲಿ 5 ವಿಕೆಟ್ ಕಳೆದುಕೊಂಡು 193 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬರ್ಮಿಂಗ್ಹ್ಯಾಮ್ ಫಿನಿಕ್ಸ್ ತಂಡವು 100 ಎಸೆತಗಳಲ್ಲಿ 9 ವಿಕೆಟ್ ಕಳೆದುಕೊಂಡು 157 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ನಾರ್ಥನ್ ಸೂಪರ್ ಚಾರ್ಜರ್ಸ್ ತಂಡವು 36 ರನ್ಗಳ ಜಯ ಸಾಧಿಸಿದೆ.
ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ ದಿ ಹಂಡ್ರೆಡ್ ಲೀಗ್ನ 14ನೇ ಪಂದ್ಯದಲ್ಲಿ ನಾರ್ಥನ್ ಸೂಪರ್ ಚಾರ್ಜರ್ಸ್ ತಂಡವು ಭರ್ಜರಿ ಜಯ ಸಾಧಿಸಿದೆ. ಲೀಡ್ಸ್ನ ಹೆಡಿಂಗ್ಲೆ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಬರ್ಮಿಂಗ್ಹ್ಯಾಮ್ ಫಿನಿಕ್ಸ್ ಹಾಗೂ ನಾರ್ಥನ್ ಸೂಪರ್ ಚಾರ್ಜರ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಈ ಮ್ಯಾಚ್ನಲ್ಲಿ ಟಾಸ್ ಗೆದ್ದ ಬರ್ಮಿಂಗ್ಹ್ಯಾಮ್ ಫಿನಿಕ್ಸ್ ತಂಡದ ನಾಯಕ ಲಿಯಾಮ್ ಲಿವಿಂಗ್ಸ್ಟೋನ್ ಬೌಲಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ನಾರ್ಥನ್ ಸೂಪರ್ ಚಾರ್ಜರ್ಸ್ ತಂಡಕ್ಕೆ ಝಾಕ್ ಕ್ರಾಲಿ (45) ಹಾಗೂ ಡೇವಿಡ್ ಮಲಾನ್ (58) ಉತ್ತಮ ಆರಂಭ ಒದಗಿಸಿದ್ದರು. ಆ ಬಳಿಕ ಬಂದ ಹ್ಯಾರಿ ಬ್ರೂಕ್ ಮೊದಲ ಎಸೆತದಲ್ಲೇ ದಿಲ್ಸ್ಕೂಪ್ ಸಿಕ್ಸ್ ಸಿಡಿಸಿ ಗಮನ ಸೆಳೆದರು. ಇದೀಗ ಈ ಸಿಕ್ಸ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಇನ್ನು ಈ ಪಂದ್ಯದಲ್ಲಿ 14 ಎಸೆತಗಳನ್ನು ಎದುರಿಸಿದ ಬ್ರೂಕ್ ಅಜೇಯ 31 ರನ್ ಬಾರಿಸಿದರು. ಈ ಮೂಲಕ ನಾರ್ಥನ್ ಸೂಪರ್ ಚಾರ್ಜರ್ಸ್ ತಂಡವು 100 ಎಸೆತಗಳಲ್ಲಿ 5 ವಿಕೆಟ್ ಕಳೆದುಕೊಂಡು 193 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಬರ್ಮಿಂಗ್ಹ್ಯಾಮ್ ಫಿನಿಕ್ಸ್ ತಂಡವು 100 ಎಸೆತಗಳಲ್ಲಿ 9 ವಿಕೆಟ್ ಕಳೆದುಕೊಂಡು 157 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ನಾರ್ಥನ್ ಸೂಪರ್ ಚಾರ್ಜರ್ಸ್ ತಂಡವು 36 ರನ್ಗಳ ಜಯ ಸಾಧಿಸಿದೆ.

