‘ಹಗ್ಗ’ ಸಿನಿಮಾ ಟ್ರೇಲರ್​ ಬಿಡುಗಡೆ ವೇದಿಕೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಸೀಮಂತ

Updated on: Sep 16, 2024 | 6:57 AM

ಕನ್ನಡದ ಖ್ಯಾತ ನಟಿ ಹರ್ಷಿಕಾ ಪೂಣಚ್ಚ ಅವರು ತಾಯಿ ಆಗುತ್ತಿದ್ದಾರೆ. ತುಂಬು ಗರ್ಭಿಣಿ ಆಗಿರುವ ಅವರು ಶೀಘ್ರದಲ್ಲೇ ಮೊದಲ ಮಗುವಿಗೆ ಜನ್ಮ ನೀಡಲಿದ್ದಾರೆ. ಹಾಗಾಗಿ ‘ಹಗ್ಗ’ ಸಿನಿಮಾದ ಟ್ರೇಲರ್​ ಲಾಂಚ್ ಕಾರ್ಯಕ್ರಮದಲ್ಲಿ ಅವರಿಗೆ ಸೀಮಂತ ಮಾಡಲಾಯಿತು. ಈ ವೇಳೆ ನಟಿಯರಾದ ಅನು ಪ್ರಭಾಕರ್​, ಪ್ರಿಯಾಂಕಾ ಉಪೇಂದ್ರ ಮುಂತಾದವರು ಹಾಜರಿದ್ದರು.

‘ಹಗ್ಗ’ ಸಿನಿಮಾದ ಟ್ರೇಲರ್​ ರಿಲೀಸ್​ ಮಾಡಲಾಗಿದೆ. ಟ್ರೇಲರ್​ ಮೂಲಕ ನಿರೀಕ್ಷೆ ಹೆಚ್ಚಿಸಿದ ಈ ಸಿನಿಮಾದಲ್ಲಿ ಅನು ಪ್ರಭಾಕರ್​, ಹರ್ಷಿಕಾ ಪೂಣಚ್ಚ, ವೇಣು, ತಬಲಾ ನಾಣಿ ಮುಂತಾದವರು ನಟಿಸಿದ್ದಾರೆ. ಟ್ರೇಲರ್​ ಬಿಡುಗಡೆ ಕಾರ್ಯಕ್ರಮದ ವೇದಿಕೆಯಲ್ಲಿ ಹರ್ಷಿಕಾ ಪೂಣಚ್ಚ ಅವರಿಗೆ ಸೀಮಂತ ಮಾಡಿದ್ದು ವಿಶೇಷವಾಗಿತ್ತು. ಹರ್ಷಿಕಾ ಪೂಣಚ್ಚ ಮತ್ತು ಭುವನ್​ ಪೊನ್ನಣ್ಣ ದಂಪತಿ ಈಗ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿ ಇದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More