AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs NZ: ನ್ಯೂಜಿಲೆಂಡ್ ವಿರುದ್ಧ ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ

IND vs NZ: ನ್ಯೂಜಿಲೆಂಡ್ ವಿರುದ್ಧ ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದ ಹರ್ಷಿತ್ ರಾಣಾ

ಪೃಥ್ವಿಶಂಕರ
|

Updated on: Jan 18, 2026 | 4:25 PM

Share

Harshit Rana's Heroics: ಟೀಂ ಇಂಡಿಯಾದ ಯುವ ವೇಗಿ ಹರ್ಷಿತ್ ರಾಣಾ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಸರಣಿಯ ಮೂರೂ ಪಂದ್ಯಗಳಲ್ಲಿ ವಿಕೆಟ್ ಕಬಳಿಸಿ, ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇಂದೋರ್‌ನಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ಡೆವೊನ್ ಕಾನ್ವೇ ಅವರ ವಿಕೆಟ್ ಪಡೆದು ವಿಶೇಷ ಹ್ಯಾಟ್ರಿಕ್ ಪೂರ್ಣಗೊಳಿಸಿದರು. ಕಾನ್ವೇಯನ್ನು ಸರಣಿಯಲ್ಲಿ ಮೂರು ಬಾರಿ ಔಟ್ ಮಾಡಿ ರಣಾ ಪ್ರಭಾವಿ ಬೌಲಿಂಗ್ ಪ್ರದರ್ಶಿಸಿದ್ದಾರೆ.

ಟೀಂ ಇಂಡಿಯಾದ ಯುವ ವೇಗಿ ಹರ್ಷಿತ್ ರಾಣಾ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ತಮ್ಮ ಅಮೋಘ ಪ್ರದರ್ಶನವನ್ನು ಮುಂದುವರೆಸಿದ್ದಾರೆ. ಸರಣಿಯ ಮೂರು ಪಂದ್ಯಗಳಲ್ಲಿ ವಿಕೆಟ್‌ಗಳನ್ನು ಕಬಳಿಸುವ ಮೂಲಕ ತಮ್ಮ ಆಯ್ಕೆ ಸರಿಯಾಗಿದೆ ಎಂಬುದನ್ನು ಸಾಭೀತುಪಡಿಸಿದ್ದಾರೆ. ಇದರ ಜೊತೆಗೆ ಇಂದೋರ್‌ನಲ್ಲಿ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ವಿಶೇಷ ಹ್ಯಾಟ್ರಿಕ್ ಸಹ ಪೂರ್ಣಗೊಳಿಸಿದ್ದಾರೆ. ಹೋಳ್ಕರ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ ಕೊನೆಯ ಏಕದಿನ ಪಂದ್ಯದ ಎರಡನೇ ಓವರ್‌ನಲ್ಲಿ ಬೌಲಿಂಗ್ ಜವಾಬ್ದಾರಿ ವಹಿಸಿಕೊಂಡ ಹರ್ಷಿತ್, ಮೊದಲ ಎಸೆತದಲ್ಲೇ ಆರಂಭಿಕ ಡೆವೊನ್ ಕಾನ್ವೇ ಅವರ ವಿಕೆಟ್ ಪಡೆದರು.

ಈ ವಿಕೆಟ್ ಹರ್ಷಿತ್ ರಾಣಾಗೆ ವಿಶೇಷವಾಗಿತ್ತು ಏಕೆಂದರೆ ಅದರೊಂದಿಗೆ ಅವರು ಈ ಸರಣಿಯಲ್ಲಿ ವಿಶೇಷ ಹ್ಯಾಟ್ರಿಕ್ ಸಹ ಪೂರ್ಣಗೊಳಿಸಿದರು. ವಾಸ್ತವವಾಗಿ, ಸರಣಿಯ ಮೂರು ಪಂದ್ಯಗಳಲ್ಲಿ ಹರ್ಷಿತ್, ಡೆವೊನ್ ಕಾನ್ವೇ ಅವರನ್ನು ಮೂರು ಬಾರಿ ಔಟ್ ಮಾಡಿದ್ದಾರೆ. ಮೊದಲ ಪಂದ್ಯದಲ್ಲಿ 56 ರನ್‌ ಬಾರಿಸಿದ್ದ ಕಾನ್ವೇಗೆ ಪೆವಿಲಿಯನ್ ದಾರಿ ತೋರಿಸಿದ ಹರ್ಷಿತ್, ಎರಡನೇ ಪಂದ್ಯದಲ್ಲಿ ಕೇವಲ 5 ರನ್‌ಗಳಿಗೆ ಔಟ್ ಮಾಡಿದರು. ಇದೀಗ ಮೂರನೇ ಪಂದ್ಯದಲ್ಲೂ ಕೇವಲ ಐದು ರನ್​ಗಳಿಗೆ ಕಾನ್ವೇ ಇನ್ನಿಂಗ್ಸ್​ಗೆ ಅಂತ್ಯ ಹಾಡಿದ್ದಾರೆ.