ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ಅವ್ಯವಸ್ಥೆ ಬಗ್ಗೆ ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ನಗರನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ತೀವ್ರ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಪರೀಕ್ಷೆಗೆ 86 ದಿನ ಬಾಕಿ ಇದ್ದರೂ ಶಿಕ್ಷಕರ ನೇಮಕವಾಗಿಲ್ಲ. ಪಾಠಗಳು ನಡೆಯದೆ, ಪರೀಕ್ಷೆಗೆ ತಯಾರಿ ಮಾಡಲು ಸಾಧ್ಯವಾಗದೆ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ಸಂಸದ ಶ್ರೇಯಸ್ ಪಟೇಲ್ ಅವರು ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.
ಹಾಸನ, ಡಿಸೆಂಬರ್ 28: ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ನಗರನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ (Teacher) ಕೊರತೆ ಉಂಟಾಗಿದೆ. ಪರೀಕ್ಷೆ ಹತ್ತಿರ ಬರುತ್ತಿದ್ದು ಶಿಕ್ಷಕರಿಲ್ಲದೆ ಪಾಠಗಳಾಗಿಲ್ಲ ಹೇಗೆ ಪರೀಕ್ಷೆ ಬರೆಯುವುದು ಎಂದು ವಿದ್ಯಾರ್ಥಿಗಳು ಅಳಲು ತೊಡಿಕೊಂಡಿದ್ದಾರೆ. ಸರ್ಕಾರಿ ಶಾಲೆಯ ಅವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ಸದ್ಯ ವೈರಲ್ ಆಗಿದೆ. ಸಂಸದ ಶ್ರೇಯಸ್ ಪಟೇಲ್ ಅವರು ಸಮಸ್ಯೆ ಬಗೆಹರಿಸಿ, ಪರೀಕ್ಷೆ ವೇಳೆಗಾದರು ಶಿಕ್ಷಕರ ನೆಮಕ ಮಾಡಿಸಿ ಎಂದು ಮನವಿ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.