Hasanamba Darshan: ಹಾಸನಾಂಬ ದರ್ಶನಕ್ಕೆ ನಾಲ್ಕನೇ ದಿನವೂ ಭಕ್ತ ಸಾಗರ
ಹಾಸನದ ಐತಿಹಾಸಿಕ ಹಾಸನಾಂಬ ದೇವಿ ದೇಗುಲದ ಗರ್ಭಗುಡಿ ತೆರೆದು 4 ದಿನಗಳಾಗಿದ್ದು, ನಾಲ್ಕನೇ ದಿನವೂ ದೇವಿಯ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ರಾಜಕಾರಣಿಗಳು, ಸಿನಿಮಾ ತಾರೆಯರು ಸೇರಿದಂತೆ ಅನೇಕ ಗಣ್ಯರು, ಸಾರ್ವಜನಿಕರು ಶಕ್ತಿ ದೇವತೆಯ ದರ್ಶನ ಪಡೆದರು.
ಹಾಸನ, ಅಕ್ಟೋಬರ್ 28: ಹಾಸನದ ಹಾಸನಾಂಬ ದೇವಿ ಸಾರ್ವಜನಿಕ ದರ್ಶನ 4ನೇ ದಿನಕ್ಕೆ ಕಾಲಿಟ್ಟಿದ್ದು, ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಹಾಸನಾಂಬೆ ದರ್ಶನ ಪಡೆಯುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಇಂದು ಸಂಜೆ 4 ಗಂಟೆಗೆ ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ಹೆಲಿಕಾಪ್ಟರ್ ಮೂಲಕ ಬೂವನಹಳ್ಳಿ ಹೆಲಿಪ್ಯಾಡ್‌ಗೆ ಆಗಮಿಸುವ ಸಿಎಂ, ನಂತರ ಹಾಸನಾಂಬ ದೇವಿ ದರ್ಶನಕ್ಕೆ ತೆರಳಲಿದ್ದಾರೆ. ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸಿಎಂಗೆ ಸಾಥ್ ನೀಡಲಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos