ಹಾಸನಾಂಬೆ ದರ್ಶನಕ್ಕೆ ಮುಗಿಬಿದ್ದ ಭಕ್ತರು: ಭಾನುವಾರದ ಹಿನ್ನಲೆ ಬೆಳಿಗ್ಗೆಯಿಂದಲೇ ಜನಜಂಗುಳಿ

Edited By:

Updated on: Nov 08, 2026 | 9:06 AM

ಹಾಸನಾಂಬೆ ಜಾತ್ರೆಯ 10ನೇ ದಿನದ ಭಾನುವಾರ ದೇವಾಲಯದಲ್ಲಿ ಭಕ್ತಸಾಗರವೇ ಹರಿದುಬಂದಿದೆ. ಧರ್ಮ ದರ್ಶನ ಮತ್ತು ಟಿಕೆಟ್ ಸಾಲುಗಳಲ್ಲಿ ಜನದಟ್ಟಣೆ ಹೆಚ್ಚಾಗಿದ್ದು, ಅಂತಿಮ ಎರಡು ದಿನಗಳಲ್ಲಿ ದರ್ಶನ ಪಡೆಯಲು ಭಕ್ತರು ಮುಗಿಬಿದ್ದಿದ್ದಾರೆ. ಸುಗಮ ದರ್ಶನಕ್ಕೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮೊಬೈಲ್ ಫೋನ್ ಬಳಕೆಗೆ ನಿರ್ಬಂಧ ವಿಧಿಸಲಾಗಿದ್ದು, ಫೋಟೋ ಮತ್ತು ವಿಡಿಯೋ ಚಿತ್ರೀಕರಣವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಹಾಸನ, ನವೆಂಬರ್​​ 08: ರಾಜ್ಯದ ಪ್ರಸಿದ್ಧ ಹಾಸನಾಂಬೆ ದೇವಾಲಯದ ಜಾತ್ರೆಯ 10ನೇ ದಿನವಾದ ಭಾನುವಾರ ಅಪಾರ ಸಂಖ್ಯೆಯ ಭಕ್ತರು ದರ್ಶನಕ್ಕಾಗಿ ಹರಿದು ಬಂದಿದ್ದಾರೆ. ವಾರಾಂತ್ಯ ಮತ್ತು ಜಾತ್ರೆಯ ಅಂತಿಮ ದಿನಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜನಸಂದಣಿ ತೀವ್ರವಾಗಿ ಹೆಚ್ಚಳವಾಗಿದೆ. ದೇವಿಯ ದರ್ಶನ ಪಡೆಯಲು ಧರ್ಮ ದರ್ಶನದ ಸಾಲುಗಳು, ಹಾಗೂ 300 ಮತ್ತು 1000 ರೂ.ಗಳ ವಿಶೇಷ ಪ್ರವೇಶ ಟಿಕೆಟ್ ಸಾಲುಗಳೆಲ್ಲವೂ ಭಕ್ತರಿಂದ ತುಂಬಿ ತುಳುಕುತ್ತಿವೆ. ದರ್ಶನಕ್ಕೆ ಕೇವಲ ಎರಡು ದಿನ ಮಾತ್ರ ಅವಕಾಶವಿದ್ದು, ವೀಐಪಿಗಳು ಸೇರಿದಂತೆ ಹಲವಾರು ಗಣ್ಯಾತಿಗಣ್ಯರು ಇಂದು ದೇವಿಯ ದರ್ಶನಕ್ಕೆ ಆಗಮಿಸುವ ನಿರೀಕ್ಷೆಯಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೂ ಸಹ ಹಾಸನಾಂಬೆ ದರ್ಶನ ಪಡೆಯಲಿದ್ದಾರೆ. ದೇವಾಲಯದೊಳಗೆ ಭಕ್ತರ ಸುಗಮ ಚಲನೆಗಾಗಿ ಮತ್ತು ಸರದಿಯ ನಿರ್ವಹಣೆಗಾಗಿ ಕಟ್ಟುನಿಟ್ಟಿನ ನಿಯಮಗಳನ್ನು ಪಾಲಿಸಲಾಗುತ್ತಿದೆ. ಮೊಬೈಲ್ ಫೋನ್ ಬಳಕೆಗೆ ನಿರ್ಬಂಧ ವಿಧಿಸಲಾಗಿದ್ದು, ಫೋಟೋ ಮತ್ತು ವಿಡಿಯೋ ಚಿತ್ರೀಕರಣವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಬಾಗಿಲಿನ ಬಳಿ ನಿಲ್ಲದಂತೆ, ತ್ವರಿತವಾಗಿ ದರ್ಶನ ಪಡೆದು ಮುಂದುವರಿಯುವಂತೆ ಭಕ್ತರಿಗೆ ಸೂಚನೆ ನೀಡಲಾಗುತ್ತಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More