AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬೆ ದರ್ಶನ 4ನೇ ದಿನ: ಭಕ್ತರ ದರ್ಶನ, ಆದಾಯದಲ್ಲೂ ದಾಖಲೆ!

ಹಾಸನಾಂಬೆ ದರ್ಶನ 4ನೇ ದಿನ: ಭಕ್ತರ ದರ್ಶನ, ಆದಾಯದಲ್ಲೂ ದಾಖಲೆ!

ಮಂಜುನಾಥ ಕೆಬಿ
| Edited By: |

Updated on: Nov 02, 2026 | 4:09 PM

Share

ವರ್ಷಕ್ಕೊಮ್ಮೆ ದರ್ಶನ ಕರುಣಿಸುವ ಹಾಸನದ ಹಾಸನಾಂಬ ದೇವಾಲಯದ ಬಾಗಿಲು ತೆರೆದಿದ್ದು, ಕಳೆದ ನಾಲ್ಕು ದಿನಗಳಿಂದ ಭಕ್ತರು ಸಾಗರೋಪಾದಿಯಲ್ಲಿ ಬಂದು ತಾಯಿ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ನವೆಂಬರ್ 11ರವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಇರುವುದರಿಂದ ಕರ್ನಾಟಕದ ಮೂಲೆ ಮೂಲೆಗಳಿಂದ ಭಕ್ತರು ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ನಾಲ್ಕು ದಿನದಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದರ್ಶನ ಪಡೆದುಕೊಂಡಿದ್ದಾರೆ. ಇನ್ನು ದರ್ಶನ ಹಾಗು ಲಡ್ಡು ಮಾರಾಟದಿಂದ 6.5 ಕೋಟಿ ಆದಾಯ ಸಂಗ್ರಹವಾಗಿದೆ. ಇದರೊಂದಿಗೆ ದರ್ಶನ ಹಾಗೂ ಆದಾಯದಲ್ಲೂ ದಾಖಲೆ.

ಹಾಸನ, (ನವೆಂಬರ್ 02): ವರ್ಷಕ್ಕೊಮ್ಮೆ ದರ್ಶನ ಕರುಣಿಸುವ ಹಾಸನದ ಹಾಸನಾಂಬ ದೇವಾಲಯದ ಬಾಗಿಲು ತೆರೆದಿದ್ದು, ಕಳೆದ ನಾಲ್ಕು ದಿನಗಳಿಂದ ಭಕ್ತರು ಸಾಗರೋಪಾದಿಯಲ್ಲಿ ಬಂದು ತಾಯಿ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ನವೆಂಬರ್ 11ರವರೆಗೆ ಮಾತ್ರ ದರ್ಶನಕ್ಕೆ ಅವಕಾಶ ಇರುವುದರಿಂದ ಕರ್ನಾಟಕದ ಮೂಲೆ ಮೂಲೆಗಳಿಂದ ಭಕ್ತರು ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ನಾಲ್ಕು ದಿನದಲ್ಲಿ ಎಂಟು ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದರ್ಶನ ಪಡೆದುಕೊಂಡಿದ್ದಾರೆ. ಇನ್ನು ದರ್ಶನ ಹಾಗು ಲಡ್ಡು ಮಾರಾಟದಿಂದ 6.5 ಕೋಟಿ ಆದಾಯ ಸಂಗ್ರಹವಾಗಿದೆ. ಇದರೊಂದಿಗೆ ದರ್ಶನ ಹಾಗೂ ಆದಾಯದಲ್ಲೂ ದಾಖಲೆ.

ಇನ್ನು ಈ ಬಗ್ಗೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಮಾತನಾಡಿದ್ದು, ನಾಲ್ಕನೇ ದಿನದ ದರ್ಶನ ದರ್ಶನದ ನಡುವೆ ಎಂಟು ಲಕ್ಷಕ್ಕೂ ಅದಿಕ ಭಕ್ತರಿಂದ ಹಾಸನಾಂಬೆ ದರ್ಶನ ಮಾಡಿದ್ದಾರೆ. ಟಿಕೆಟ್ ಹಾಗೂ ಲಡ್ಡು ಮಾರಾಟದಿಂದ 6.5 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಭಕ್ತರ ದರ್ಶನ, ಆದಾಯಗಳಿಕೆಯಲ್ಲೂ ದಾಖಲೆ ಎಂದರು.

ನವೆಂಬರ್ 6ಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ನವೆಂಬರ್ 8ಕ್ಕೆ ಸಿಎಂ ಡಿಕೆ ಶಿವಕುಮಾರ್ ಹಾಸನಾಂಬೆ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಯಾರೇ ಗಣ್ಯರು ಬಂದರೂ ಅವರಿಗೆ ಮೀಸಲಾದ ಸಮಯದಲ್ಲೇ ಬರುತ್ತಾರೆ. ನೈವೇದ್ಯ ಸಮಯವನ್ನು ಕಡಿಮೆ ಮಾಡಿ ಭಕ್ತರ ದರ್ಶನಕ್ಕೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More