ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಹರಿದು ಬಂದ ಭಕ್ತರು, ಹಾಸನದಲ್ಲಿ ಜನಜಂಗುಳಿ
ಭಾನುವಾರದ ರಜೆ ಇರುವುದರಿಂದ ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಆಗಮಿಸಿದ್ದಾರೆ. ಧರ್ಮ ದರ್ಶನ, 1000 ರೂ., 300 ರೂ. ವಿಶೇಷ ದರ್ಶನದ ಸಾಲುಗಳಲ್ಲಿ ಜನರು ತುಂಬಿ ತುಳುಕುತ್ತಿದ್ದಾರೆ. ಹೀಗಾಗಿ ನೂಕು-ನುಗ್ಗಲು ಉಂಟಾಗದಂತೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಧರ್ಮ ದರ್ಶನದ ಸಾಲಿನಲ್ಲಿ ನೂರಾರು ಮಹಿಳಾ ಭಕ್ತರು ದರ್ಶನಕ್ಕೆ ಬಂದಿದ್ದಾರೆ. ದೇವಿ ದರ್ಶನ ತಡವಾಗುತ್ತಿರುವ ಹಿನ್ನಲೆಯಲ್ಲಿ ಸರತಿ ಸಾಲಿನಲ್ಲಿ ಮಹಿಳಾ ಭಕ್ತರು ಕುಳಿತುಕೊಂಡಿದ್ದಾರೆ.
ಹಾಸನ, ನವೆಂಬರ್ 01): ಭಾನುವಾರದ ರಜೆ ಇರುವುದರಿಂದ ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಯಿಂದ ಭಕ್ತರು ಆಗಮಿಸಿದ್ದಾರೆ. ಧರ್ಮ ದರ್ಶನ, 1000 ರೂ., 300 ರೂ. ವಿಶೇಷ ದರ್ಶನದ ಸಾಲುಗಳಲ್ಲಿ ಜನರು ತುಂಬಿ ತುಳುಕುತ್ತಿದ್ದಾರೆ. ಹೀಗಾಗಿ ನೂಕು-ನುಗ್ಗಲು ಉಂಟಾಗದಂತೆ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಧರ್ಮ ದರ್ಶನದ ಸಾಲಿನಲ್ಲಿ ನೂರಾರು ಮಹಿಳಾ ಭಕ್ತರು ದರ್ಶನಕ್ಕೆ ಬಂದಿದ್ದಾರೆ. ದೇವಿ ದರ್ಶನ ತಡವಾಗುತ್ತಿರುವ ಹಿನ್ನಲೆಯಲ್ಲಿ ಸರತಿ ಸಾಲಿನಲ್ಲಿ ಮಹಿಳಾ ಭಕ್ತರು ಕುಳಿತುಕೊಂಡಿದ್ದಾರೆ. ಇನ್ನು ದೇವಿ ದರ್ಶನ ಪಡೆದು ವಾಪಾಸ್ ತೆರಳಲು ಭಕ್ತರು ಪರದಾಡುತ್ತಿದ್ದಾರೆ. ಹಾಸನ ಬಸ್ ನಿಲ್ದಾಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಜಮಾಯಿಸಿದ್ದು, ಬಸ್ ಇಲ್ಲದೇ ಪರದಾಡುತ್ತಿದ್ದಾರೆ. ಇನ್ನು ನೂಕು-ನುಗ್ಗಲು ಮಾಡದಂತೆ ಸಾರಿಗೆ ಅಧಿಕಾರಿಗಳು ಮೈಕ್ನಲ್ಲಿ ಅನೌನ್ಸ್ ಮಾಡುತ್ತಿದ್ದಾರೆ.

