ಕಾಂಗ್ರೆಸ್ ಪದಾಧಿಕಾರಿಗಳಿಗೆ ಸಚಿವ ಶಿವಲಿಂಗೇಗೌಡ ಭರ್ಜರಿ ಗಿಫ್ಟ್

Edited By:

Updated on: Nov 03, 2026 | 5:43 PM

ವರ್ಷಕ್ಕೊಮ್ಮೆ ದರ್ಶನ ಕರುಣಿಸುವ ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಇನ್ನೊಂದೆಡೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ತಮ್ಮ ಆಪ್ತರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಹೌದು...ಹಾಸನಾಂಬೆ ದರ್ಶನಕ್ಕೆ ಸಚಿವ ಶಿವಲಿಂಗೇಗೌಡ್ರು ತಮ್ಮ ಆಪ್ತರಿಗಾಗಿ 5 ಲಕ್ಷ ರೂಪಾಯಿ ನೀಡಿ 500 ಟಿಕೆಟ್ ಖರೀದಿಸಿದ್ದಾರೆ.

ಹಾಸನ, (ನವೆಂಬರ್ 03): ವರ್ಷಕ್ಕೊಮ್ಮೆ ದರ್ಶನ ಕರುಣಿಸುವ ಹಾಸನಾಂಬೆ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಇನ್ನೊಂದೆಡೆ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ತಮ್ಮ ಆಪ್ತರಿಗೆ ಬಂಪರ್ ಗಿಫ್ಟ್ ನೀಡಿದ್ದಾರೆ. ಹೌದು…ಹಾಸನಾಂಬೆ ದರ್ಶನಕ್ಕೆ ಸಚಿವ ಶಿವಲಿಂಗೇಗೌಡ್ರು ತಮ್ಮ ಆಪ್ತರಿಗಾಗಿ 5 ಲಕ್ಷ ರೂಪಾಯಿ ನೀಡಿ 500 ಟಿಕೆಟ್ ಖರೀದಿಸಿದ್ದಾರೆ. ಖುದ್ದು ತಾವೇ ಕೌಂಟರ್​ಗೆ ತೆರಳಿ 1 ಸಾವಿರ ರೂ. ಮೌಲ್ಯದ 500 ಟಿಕೆಟ್ ಖರೀದಿಸಿದ್ದು, ಬಳಿಕ ಟಿಕೆಟ್ ಗಳನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಶಿಧರ್ ಅವರಿಗೆ ಹಸ್ತಾಂತರಿಸಿದರು. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಶಿವಲಿಂಗೇಗೌಡ, ಹೆಚ್ಚುವರಿ ಟಿಕೆಟ್ ಪ್ರಿಂಟ್ ಮಾಡಿಸಲು ಆಗಲ್ಲ. ಹೆಚ್ಚು ಟಿಕೆಟ್ ಹಂಚಿದರೆ ಸಾಮಾನ್ಯ ಭಕ್ತರಿಗೆ ತೊಂದರೆ ಆಗುತ್ತದೆ. ಹೀಗಾಗಿ ಪಕ್ಷದ ಪದಾಧಿಕಾರಿಗಳಿಗೆ 500 ಟಿಕೆಟ್ ಖರೀದಿಸಿದ್ದೇನೆ ಎಂದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More