ಸಚಿವ ಶಿವಲಿಂಗೇಗೌಡ ಭರ್ಜರಿ ಡ್ಯಾನ್ಸ್: ‘ಹುಟ್ಟಿದರೆ ಕನ್ನಡ ನಾಡಲಿ’ ಹಾಡಿಗೆ ಸಖತ್ ಸ್ಟೆಪ್ಸ್ ಹಾಕಿದ ಕೆಎಂಶಿ

Edited By:

Updated on: Nov 01, 2026 | 9:26 PM

ಹಾಸನಾಂಬಾ ದೇವಿ ದರ್ಶನಕ್ಕೆ ಆಗಮಿಸಿದ್ದ ಅಬಕಾರಿ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ, ದರ್ಶನಕ್ಕೂ ಮುನ್ನ ಧರ್ಮ ದರ್ಶನದ ಸಾಲುಗಳ ಬಳಿ ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಸಮೀಪದ ವೇದಿಕೆಯಲ್ಲಿ ಪ್ರಸಾರವಾಗುತ್ತಿದ್ದ 'ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು' ಜನಪ್ರಿಯ ಹಾಡಿಗೆ ಸಚಿವರು ಹೆಜ್ಜೆ ಹಾಕಿ ಕುಣಿದು ಸಂಭ್ರಮಿಸಿದರು.

ಹಾಸನ, ನವೆಂಬರ್ 1: ಐತಿಹಾಸಿಕ ಹಾಗೂ ವಿಶ್ವಪ್ರಸಿದ್ಧ ಹಾಸನಾಂಬಾ ದೇವಾಲಯದ ದರ್ಶನೋತ್ಸವದ ಸಂಭ್ರಮ ಕಳೆಗಟ್ಟಿದ್ದು, ಪ್ರತಿದಿನ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆುತ್ತಿದ್ದಾರೆ. ಈ ನಡುವೆ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ದೇವಾಲಯಕ್ಕೆ ಭಾನುವಾರ ಭೇಟಿ ನೀಡಿ ಭಕ್ತರಿಗೆ ಕಲ್ಪಿಸಲಾಗಿರುವ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಈ ವೇಳೆ ಸಚಿವರು ಸರದಿ ಸಾಲುಗಳನ್ನು ವೀಕ್ಷಿಸುತ್ತಿದ್ದ ಸಂದರ್ಭದಲ್ಲಿ, ಅಲ್ಲೇ ಪಕ್ಕದಲ್ಲೇ ಇದ್ದ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆ ಬಳಿಗೆ ಸಚಿವ ಕೆ.ಎಂ. ಶಿವಲಿಂಗೇಗೌಡ ಆಗಮಿಸಿದರು. ಆ ವೇಳೆ ವೇದಿಕೆಯಲ್ಲಿ ಕನ್ನಡದ ಖ್ಯಾತ ‘ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು’ ಎಂಬ ಹಾಡು ಮೊಳಗುತ್ತಿತ್ತು. ಹಾಡಿಗೆ ಮನಸೋತ ಸಚಿವರು, ಎಲ್ಲರ ಎದುರಲ್ಲೇ ವೇದಿಕೆ ಮೇಲೆ ಭರ್ಜರಿ ಸ್ಟೆಪ್ ಹಾಕಿ ಕುಣಿದರು.

ಸಚಿವರ ಈ ಉತ್ಸಾಹಭರಿತ ನೃತ್ಯವನ್ನು ಕಂಡ ದೇವಿಯ ದರ್ಶನಕ್ಕೆ ತೆರಳುತ್ತಿದ್ದ ಸಹಸ್ರಾರು ಭಕ್ತರು ಹಾಗೂ ಸಾರ್ವಜನಿಕರು ಹರ್ಷೋದ್ಘಾರಗೈದರು. ಅಲ್ಲದೆ, ಸಚಿವರ ಸರಳತೆ ಹಾಗೂ ಡ್ಯಾನ್ಸ್ ಕಂಡು ಕೆಲಕಾಲ ಶಿಳ್ಳೆ ಮತ್ತು ಚಪ್ಪಾಳೆ ತಟ್ಟಿ ಖುಷಿ ವ್ಯಕ್ತಪಡಿಸಿದರು. ಸಚಿವರ ಈ ಡ್ಯಾನ್ಸ್‌ ಈಗ ಸಾಮಾಜಿಕ ಜಾಲತಾಣಗಳಲ್ಲಿಯೂ ವೈರಲ್ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More