AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಷಕ್ಕೊಮ್ಮೆ ದರ್ಶನ ನೀಡುವ 'ಹಾಸನಾಂಬೆ' ಉತ್ಸವಕ್ಕೆ ಕೌಂಟ್‌ಡೌನ್: ದರ್ಶನದ ದಿನಾಂಕಗಳು ಪ್ರಕಟ

ವರ್ಷಕ್ಕೊಮ್ಮೆ ದರ್ಶನ ನೀಡುವ ‘ಹಾಸನಾಂಬೆ’ ಉತ್ಸವಕ್ಕೆ ಕೌಂಟ್‌ಡೌನ್: ದರ್ಶನದ ದಿನಾಂಕಗಳು ಪ್ರಕಟ

ಮಂಜುನಾಥ ಕೆಬಿ
| Edited By: |

Updated on:Sep 25, 2026 | 12:57 PM

Share

ಹಾಸನದ ಅಧಿದೇವತೆ ಹಾಸನಾಂಬೆಯ 2026ರ ದರ್ಶನೋತ್ಸವಕ್ಕೆ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಆರಂಭಿಸಿದೆ. ಅಕ್ಟೋಬರ್ 29ರಂದು ಗರ್ಭಗುಡಿ ತೆರೆಯಲಿದ್ದು, ಅಕ್ಟೋಬರ್ 30 ರಿಂದ ನವೆಂಬರ್ 10ರವರೆಗೆ ಸಾರ್ವಜನಿಕ ಭಕ್ತರಿಗೆ ದರ್ಶನಕ್ಕೆ ಅವಕಾಶವಿರುತ್ತದೆ. ಈ ಬಾರಿ ಹಾಸನಾಂಬೆ ದರ್ಶನವನ್ನು ಜಿಲ್ಲೆಯ ಹಬ್ಬವಾಗಿ ಆಚರಿಸಲು ಯೋಜನೆ ರೂಪಿಸಲಾಗಿದೆ.

ಹಾಸನ, ಸೆ.25: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನದ ಅಧಿದೇವತೆ ಹಾಸನಾಂಬೆಯ 2026ರ ದರ್ಶನೋತ್ಸವಕ್ಕೆ ಜಿಲ್ಲಾಡಳಿತ ಸಿದ್ಧತೆಗಳನ್ನು ಆರಂಭಿಸಿದೆ. ಅಕ್ಟೋಬರ್ 29, 2026ರಂದು ಗರ್ಭಗುಡಿಯ ಬಾಗಿಲು ತೆರೆಯಲಿದ್ದು, ನವೆಂಬರ್ 11ರವರೆಗೆ ದೇಗುಲ ತೆರೆದಿರುತ್ತದೆ. ಮೊದಲ ಹಾಗೂ ಕೊನೆಯ ದಿನ ಹೊರತುಪಡಿಸಿ, ಒಟ್ಟು 12 ದಿನಗಳ ಕಾಲ, ಅಂದರೆ ಅಕ್ಟೋಬರ್ 30ರಿಂದ ನವೆಂಬರ್ 10ರವರೆಗೆ ಸಾರ್ವಜನಿಕ ಭಕ್ತರಿಗೆ ಹಾಸನಾಂಬೆಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಳೆದ ವರ್ಷ 23 ಲಕ್ಷಕ್ಕೂ ಹೆಚ್ಚು ಭಕ್ತರು ದರ್ಶನ ಪಡೆದಿದ್ದು, ಈ ಬಾರಿಯೂ ಹೆಚ್ಚಿನ ಸಂಖ್ಯೆಯ ಭಕ್ತರು ಬರುವ ನಿರೀಕ್ಷೆಯಿದೆ. ಸುಗಮ ದರ್ಶನಕ್ಕೆ ಬೇಕಾದ ಬ್ಯಾರಿಕೇಡ್ ವ್ಯವಸ್ಥೆ, ಪ್ರಸಾದ ವಿತರಣೆ ಸೇರಿದಂತೆ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆದಿದೆ. ಇದೇ ಸೆಪ್ಟೆಂಬರ್ 26ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಅಧಿಕೃತ ಸಭೆ ನಡೆದು, ಜಾತ್ರಾ ಮಹೋತ್ಸವದ ಪೋಸ್ಟರ್ ಮತ್ತು ವೆಬ್‌ಸೈಟ್ ಅನಾವರಣಗೊಳ್ಳಲಿದೆ. ಹಾಸನಾಂಬೆ ದರ್ಶನವು ನಾಡಿನ ಶಕ್ತಿದೇವತೆಯ ಆಶೀರ್ವಾದ ಪಡೆಯಲು ಭಕ್ತರಿಗೆ ಒಂದು ಸುವರ್ಣಾವಕಾಶವಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Sep 25, 2026 12:55 PM

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More