ಮೊದಲ ದಿನವೇ ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ
ಹಾಸನಾಂಬೆ ದೇವಿ ದರ್ಶನ ಇಂದಿನಿಂದ ಭಕ್ತರಿಗೆ ತೆರೆದಿದ್ದು, ಮೊದಲ ದಿನವೇ ಅಪಾರ ಸಂಖ್ಯೆಯ ಭಕ್ತರು ಹರಿದುಬಂದಿದ್ದಾರೆ. 13 ದಿನಗಳ ಕಾಲ ನಡೆಯುವ ದರ್ಶನಕ್ಕೆ ಜಿಲ್ಲಾಡಳಿತ ಮಹತ್ವದ ಬದಲಾವಣೆಗಳನ್ನು ತಂದಿದೆ. ದಶಕಗಳಿಂದ ಇದ್ದ ವಿಐಪಿ, ವಿವಿಐಪಿ ಪಾಸ್ ವ್ಯವಸ್ಥೆಯನ್ನು ರದ್ದುಗೊಳಿಸಿ, ಮಾಜಿ ಶಾಸಕರು ಮತ್ತು ಅಧಿಕಾರಿಗಳಿಗೆ ಗೋಲ್ಡ್ ಪಾಸ್ ವಿತರಿಸಲಾಗಿದೆ.
ಹಾಸನ, ಅ.10: ಹಾಸನಾಂಬೆ ದೇವಿ ದರ್ಶನಕ್ಕೆ (Hasanamba Temple) ಇಂದಿನಿಂದ ಭಕ್ತರಿಗೆ ಅಧಿಕೃತವಾಗಿ ಅವಕಾಶ ಕಲ್ಪಿಸಲಾಗಿದೆ. ದೇವಾಲಯದಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಯ ದರ್ಶನ ಪಡೆಯುತ್ತಿದ್ದಾರೆ. ಮೊದಲ ದಿನವೇ ದೇವಾಲಯಕ್ಕೆ ಅಪಾರ ಸಂಖ್ಯೆಯ ಭಕ್ತರು ಹರಿದುಬಂದಿದ್ದು, ಭಕ್ತಸಾಗರವೇ ನೆರೆದಿತ್ತು. ಒಟ್ಟು 13 ದಿನಗಳ ಕಾಲ ಭಕ್ತರಿಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಈ ಬಾರಿ ಹಾಸನ ಜಿಲ್ಲಾಡಳಿತ ದರ್ಶನದ ವ್ಯವಸ್ಥೆಯಲ್ಲಿ ಹಲವು ಮಹತ್ತರ ಬದಲಾವಣೆಯನ್ನು ಮಾಡಿದೆ. ಹತ್ತಾರು ವರ್ಷಗಳಿಂದ ಜಾರಿಯಲ್ಲಿದ್ದ ವಿಐಪಿ ಮತ್ತು ವಿವಿಐಪಿ ಪಾಸ್ ವ್ಯವಸ್ಥೆಯನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ. ಹೊಸ ವ್ಯವಸ್ಥೆಯಂತೆ, ಈ ವರ್ಷದಿಂದ ಮಾಜಿ ಶಾಸಕರು, ಅಧಿಕಾರಿಗಳು ಹಾಗೂ ಇತರ ಗಣ್ಯರಿಗೆ ಮಾತ್ರ ಗೋಲ್ಡ್ ಪಾಸ್ ವಿತರಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ಕ್ರಮವು ದರ್ಶನ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರುವ ಉದ್ದೇಶ ಹೊಂದಿದೆ ಎಂದು ಹೇಳಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

