ಹಾಸನಾಂಬೆಯ ಮೊದಲ ದಿನದ ದರ್ಶನೋತ್ಸವ ಆರಂಭ; ಬೆಳಿಗ್ಗೆಯೇ ದೇವಾಲಯ ದತ್ತ ಲಗ್ಗೆಯಿಟ್ಟ ಸಹಸ್ರಾರು ಭಕ್ತರು
ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆ. ಆ ನಂತರ ಮಧ್ಯಾಹ್ನ 3 ಗಂಟೆಯಿಂದ 7 ಗಂಟೆವರೆಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.
ಹಾಸನ: ಎರಡು ವರ್ಷಗಳ ಬಳಿಕ ಸಾರ್ವಜನಿಕರಿಗೆ ಹಾಸನಾಂಬೆ ದರ್ಶನ ಭಾಗ್ಯ ದೊರೆತಿದೆ. ಹಾಸನಾಂಬೆಯ ಮೊದಲ ದಿನದ ದರ್ಶನೋತ್ಸವ ಇಂದು (ಅಕ್ಟೋಬರ್ 29) ಆರಂಭವಾಗಿದ್ದು, ಬೆಳಿಗ್ಗೆಯೇ ದೇವಾಲಯ ದತ್ತ ಸಹಸ್ರಾರು ಭಕ್ತರು ಲಗ್ಗೆಯಿಟ್ಟಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ಹಾಸನಾಂಬೆಯ ದರ್ಶನ ಪಡೆಯುತ್ತಿದ್ದಾರೆ. ನೆನ್ನೆ ಹಾಸನಾಂಬೆ ಗರ್ಭಗುಡಿಯ ಬಾಗಿಲು ತೆರೆದಿದ್ದು, ಇಂದಿನಿಂದ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಇಂದು ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ 1 ಗಂಟೆ. ಆ ನಂತರ ಮಧ್ಯಾಹ್ನ 3 ಗಂಟೆಯಿಂದ 7 ಗಂಟೆವರೆಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಮೊದಲ ದಿನವೇ ಭಾರಿ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ.
ಇದನ್ನೂ ಓದಿ:
ನಿಮ್ಮೆಲ್ಲ ಕೆಲಸಗಳನ್ನು ಬದಿಗಿರಿಸಿ ಹಾಸನಕ್ಕೆ ಹೊರಡಿ, ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿದೆ!
ವರ್ಷಕ್ಕೆ ಒಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬೆ ದೇವಸ್ಥಾನದ ಬಾಗಿಲು ಓಪನ್, ನಾಳೆಯಿಂದ ಭಕ್ತರಿಗೆ ದರ್ಶನ ಭಾಗ್ಯ