ಹಾಸನ ಸಿದ್ದೇಶ್ವರ ಸ್ವಾಮಿ ಕೆಂಡೋತ್ಸವ: ಕೆಂಡ ಹಾಯ್ದು ಭಕ್ತಿ ಮೆರೆದ ಜಿಲ್ಲಾಧಿಕಾರಿ ಲತಾ ಕುಮಾರಿ

Edited By:

Updated on: Oct 23, 2025 | 10:50 AM

ಹಾಸನದ ಹಾಸನಾಂಬ ದರ್ಶನ ಇಂದು ಕೊನೆಯಾಗುತ್ತಿದೆ. ಹಾಸನಾಂಬ ದರ್ಶನ ಹಾಗೂ ಸಿದ್ದೇಶ್ವರ ಸ್ವಾಮಿ ರಥೋತ್ಸವ, ಕೆಂಡೋತ್ಸವ ಗುರುವಾರ ಸಂಭ್ರಮದಿಂದ ಜರುಗಿತು. ಇದೇ ವೇಳೆ ಜಿಲ್ಲಾಧಿಕಾರಿ ಲತಾ ಕುಮಾರಿ ಕೂಡ ಕೆಂಡ ಹಾಯ್ದು ಭಕ್ತಿ ಪ್ರದರ್ಶಿಸಿದರು. ಜಿಲ್ಲಾಧಿಕಾರಿ ಲತಾ ಕುಮಾರಿ ಕೆಂಡ ಹಾಯ್ದ ವಿಡಿಯೋ ಇಲ್ಲಿದೆ ನೋಡಿ.

ಹಾಸನ, ಅಕ್ಟೋಬರ್ 23: ಇತಿಹಾಸ ಪ್ರಸಿದ್ಧ ಹಾಸನಾಂಬೆ ದೇಗುಲದಲ್ಲಿ ಭಕ್ತರ ದರ್ಶನ ಇಂದು ಕೊನೆಯಾಗುತ್ತಿದ್ದು, ಗರ್ಭಗುಡಿ ಬಾಗಿಲು ಬಂದ್ ಮಾಡಲಾಗುತ್ತಿದೆ. ಮತ್ತೆ ಮುಂದಿನ ವರ್ಷ ಬಾಗಿಲು ಭಕ್ತರ ದರ್ಶನಕ್ಕೆ ತೆರೆಯಲಾಗುತ್ತದೆ. ಗರ್ಭಗುಡಿ ಬಾಗಿಲು ಬಂದ್ ಮಾಡುವುದಕ್ಕೂ ಮುನ್ನ ಸಿದ್ದೇಶ್ವರ ಸ್ವಾಮಿ ರಥೋತ್ಸವ ಹಾಗೂ ಕೆಂಡೋತ್ಸವ ಸಂಭ್ರಮದಿಂದ ಜರುಗಿತು. ಈ ಸಂದರ್ಭದಲ್ಲಿ, ಜಿಲ್ಲಾಧಿಕಾರಿ ಲತಾ ಕುಮಾರಿ ಸಹ ಕೆಂಡ ಹಾಯ್ದು ಭಕ್ತಿ ಭಾವ ಮೆರೆದರು. ಕಳಶ ಹೊತ್ತ ಭಕ್ತರು ಕೆಂಡ ಹಾಯ್ದಿದ್ದು ನೋಡಿ ನನಗೂ ಕೆಂಡ ಹಾಯುವ ಇಂಗಿತ ಬಂತು. ನಾನೆಂದೂ ಕೆಂಡ ಹಾಯ್ದಿರಲಿಲ್ಲ. ಮೊದಲಿಗೆ ಭಯ ಇತ್ತು. ಆದರೆ ದೇವರ ಮೇಲಿನ ಭಕ್ತಿಯಿಂದ ಕೈ ಮುಗಿದು ಹೋದೆ. ಏನೂ ಆಗಲಿಲ್ಲ ಎಂದು ಅವರು ನಂತರ ಅನುಭವ ಹಂಚಿಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More