AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸನಾಂಬ ದರ್ಶನೋತ್ಸವ 2026: ಶಕ್ತಿದೇವತೆ ಹಾಸನಾಂಬೆಯನ್ನು ನೋಡಲು ಕಿಕ್ಕಿರಿದ ಭಕ್ತರ ದಂಡು!

ಹಾಸನಾಂಬ ದರ್ಶನೋತ್ಸವ 2026: ಶಕ್ತಿದೇವತೆ ಹಾಸನಾಂಬೆಯನ್ನು ನೋಡಲು ಕಿಕ್ಕಿರಿದ ಭಕ್ತರ ದಂಡು!

ಮಂಜುನಾಥ ಕೆಬಿ
| Edited By: |

Updated on:Nov 02, 2026 | 10:24 AM

Share

ಹಾಸನಾಂಬ ದೇವಿ ಸಾರ್ವಜನಿಕ ದರ್ಶನಕ್ಕೆ ಸಾವಿರಾರು ಭಕ್ತರು ಹರಿದುಬಂದಿದ್ದಾರೆ. ನಾಲ್ಕನೇ ದಿನವೂ ಭಕ್ತರ ದಂಡು ದೇವಾಲಯದತ್ತ ಸಾಗಿದೆ. ಧರ್ಮ ದರ್ಶನ ಮತ್ತು ವಿಶೇಷ ದರ್ಶನ ಎರಡೂ ಸಾಲುಗಳಲ್ಲಿ ಭಕ್ತರು ತುಂಬಿ ತುಳುಕುತ್ತಿದ್ದಾರೆ. ಕೇವಲ ಮೂರು ದಿನಗಳಲ್ಲಿ ದೇವಾಲಯಕ್ಕೆ ಐದು ಕೋಟಿಗೂ ಹೆಚ್ಚು ಆದಾಯ ಸಂಗ್ರಹವಾಗಿದೆ.

ಹಾಸನ, ನವೆಂಬರ್ 02: ಐತಿಹಾಸಿಕ ಹಾಸನಾಂಬ ದೇವಾಲಯದ ಸಾರ್ವಜನಿಕ ದರ್ಶನಕ್ಕೆ ಈ ಬಾರಿ ಅಭೂತಪೂರ್ವ ಜನಸಾಗರ ಹರಿದುಬರುತ್ತಿದೆ. ಶಕ್ತಿದೇವತೆ ಹಾಸನಾಂಬೆಯ ದರ್ಶನಕ್ಕೆಂದು ರಾಜ್ಯದ ಮೂಲೆಮೂಲೆಯಿಂದ ಆಗಮಿಸುತ್ತಿರುವ ಭಕ್ತಾದಿಗಳಿಂದ ದೇವಾಲಯದ ಸುತ್ತಮುತ್ತಲ ಪ್ರದೇಶ ಜನಜಂಗುಳಿಯಿಂದ ತುಂಬಿ ತುಳುಕುತ್ತಿದೆ. ಸಾರ್ವಜನಿಕ ದರ್ಶನ ಪ್ರಾರಂಭವಾಗಿ ನಾಲ್ಕನೇ ದಿನವೂ ಸಹ ಸಾವಿರಾರು ಭಕ್ತರು ದೇವಿಯ ಕೃಪೆಗೆ ಪಾತ್ರರಾಗಲು ಸರತಿ ಸಾಲಿನಲ್ಲಿ ನಿಂತಿದ್ದಾರೆ.

ದೇವಸ್ಥಾನದಲ್ಲಿ ಧರ್ಮ ದರ್ಶನ, 1000 ರೂಪಾಯಿ ಹಾಗೂ 300 ರೂಪಾಯಿಗಳ ವಿಶೇಷ ದರ್ಶನಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದ್ದು, ಎಲ್ಲಾ ಸಾಲುಗಳಲ್ಲೂ ಭಕ್ತಾದಿಗಳು ಕಿಕ್ಕಿರಿದು ತುಂಬಿದ್ದಾರೆ. ದೇವರ ದರ್ಶನ ಪಡೆಯಲು ಕೆಲ ಗಂಟೆಗಳ ಕಾಲ ಕಾಯುವುದು ಸಾಮಾನ್ಯವಾಗಿದೆ. ದರ್ಶನ ಆರಂಭವಾದ ಮೊದಲ ಮೂರು ದಿನಗಳಲ್ಲೇ ದೇವಾಲಯಕ್ಕೆ ಐದು ಕೋಟಿಗೂ ಹೆಚ್ಚು ಆದಾಯ ಸಂಗ್ರಹವಾಗಿದ್ದು, ಇದು ದೇವಸ್ಥಾನದ ಇತಿಹಾಸದಲ್ಲಿ ದಾಖಲೆಯಾಗಿದೆ. ಭಕ್ತರ ಸುರಕ್ಷತೆ ಮತ್ತು ಸುಗಮ ದರ್ಶನಕ್ಕೆ ಸೂಕ್ತ ವ್ಯವಸ್ಥೆಗಳನ್ನು ಮಾಡಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 02, 2026 09:38 AM

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More