Hasanamba Utsava 2026 Live: ತೆರೆದ ಹಾಸನಾಂಬ ದೇಗುಲದ ಬಾಗಿಲು; ದರ್ಶನೋತ್ಸವದ ನೇರಪ್ರಸಾರ

Edited By:

Updated on: Oct 29, 2026 | 12:28 PM

ಹಾಸನಾಂಬ ದರ್ಶನೋತ್ಸವ 2026 ನೇರ ಪ್ರಸಾರ: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಇಂದು ಶಾಸ್ತ್ರೋಕ್ತವಾಗಿ ತೆರೆದಿದ್ದು, ನವೆಂಬರ್ 11ರವರೆಗೆ ವೈಭವದ ಹಾಸನಾಂಬ ದರ್ಶನೋತ್ಸವ ನಡೆಯಲಿದೆ. ದೇಗುಲದ ಗರ್ಭಗುಡಿಯ ಬಾಗಿಲು ತೆರೆಯುವ ಮುನ್ನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸಂಪನ್ನಗೊಂಡಿವೆ. ಇಂದಿನ ಪೂಜಾ ವಿಧಿವಿಧಾನಗಳ ನೇರಪ್ರಸಾರ ಇಲ್ಲಿದೆ.

ಹಾಸನ, ಅಕ್ಟೋಬರ್​​ 29: ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಶಕ್ತಿದೇವತೆ ಹಾಸನಾಂಬೆ ದೇಗುಲದ ಗರ್ಭಗುಡಿ ಬಾಗಿಲು ಓಪನ್​​ ಆಗಿದೆ. ಇಂದಿನಿಂದ ನ.11ರವರೆಗೆ ಹಾಸನಾಂಬ ದರ್ಶನೋತ್ಸವ ನಡೆಯಲಿದೆ. ಗೊನೆಯುಳ್ಳ ಬಾಳೆ ಕಂಬ ಕಡಿದ ಬಳಿಕ ಗರ್ಭಗುಡಿ ಬಾಗಿಲು ತೆರೆದಿದ್ದು, ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥಶ್ರೀ, ಸಿದ್ಧಗಂಗಾ ಮಠದ ಸಿದ್ದಲಿಂಗ ಶ್ರೀಗಳು, ಮುಜರಾಯಿ ಸಚಿವ ಬಸವಂತಪ್ಪ ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ, ಸಂಸದ ಶ್ರೇಯಸ್​ ಪಟೇಲ್​, ಶಾಸಕ ಸ್ವರೂಪ್‌ ಪ್ರಕಾಶ್, ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ, ಡಿಸಿ ಕೆ.ಎಸ್.ಲತಾಕುಮಾರಿ, ಎಸ್​ಪಿ ಶುಭನ್ವಿತಾ ಸೇರಿ ವಿವಿಧ ಗಣ್ಯರು ಈ ವೇಳೆ ಉಪಸ್ಥಿತರಿದ್ದರು. ಹಾಸನಾಂಬ ದರ್ಶನೋತ್ಸವದ ನೇರಪ್ರಸಾರ ಇಲ್ಲಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Oct 29, 2026 11:47 AM
Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More