ತನ್ನ ವಿಡಿಯೋ ಇನ್‌ಸ್ಟಾಗ್ರಾಮ್‌ನಲ್ಲಿ ವೈರಲ್ ಆಯಿತೆಂದು ಪ್ರಾಣ ಕಳೆದುಕೊಂಡ ಕಾಲೇಜು ವಿದ್ಯಾರ್ಥಿ
ಪಾರ್ಕ್‌ನಲ್ಲಿ ತಾನು ಯುವತಿಯ ಕೈ ಹಿಡಿದು ಕುಳಿತಿರುವಂತಹ ದೃಶ್ಯವನ್ನು ಯಾರೋ ವಿಡಿಯೋ ಮಾಡಿ ಇನ್‌ಸ್ಟಾಗ್ರಾಮ್‌ನಲ್ಲಿ ಹರಿಬಿಟ್ಟಿದ್ದಕ್ಕೆ ಯುವಕನೊಬ್ಬ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಂತಹ ಘಟನೆ ಹಾಸನದಲ್ಲಿ ನಡೆದಿದೆ. ನಮ್ ಹುಡುಗ ಕೈ ಹಿಡಿದು ಕುಳಿತಿರೋದಷ್ಟೆ ಅದನ್ನು ಈ ರೀತಿ ವಿಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡುವ ಅವಶ್ಯಕತೆ ಏನಿತ್ತು ಎಂದು ಯುವಕನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಸನ, ಸೆಪ್ಟೆಂಬರ್ 19: ಪಾರ್ಕ್‌ನಲ್ಲಿ ತಾನು ಯುವತಿಯ ಕೈ ಹಿಡಿದು ಕುಳಿತಿದ್ದಂತ ದೃಶ್ಯವನ್ನು ಯಾರೋ ವಿಡಿಯೋ ಮಾಡಿ, ತಪ್ಪಾಗಿ ಬಿಂಬಿಸಿ ಇನ್‌ಸ್ಟಾಗ್ರಾಮ್‌ನಲ್ಲಿ (Instagram) ಹರಿಬಿಟ್ಟರೆಂದು ಮನನೊಂದು ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಂತಹ ಘಟನೆ ಹಾಸನದಲ್ಲಿ ನಡೆದಿದೆ. ಅಂತಿಮ ವರ್ಷದ ಬಿ.ಎ ವಿದ್ಯಾರ್ಥಿ ಪವನ್ ಕೆ. (21) ಆತ್ಮಹತ್ಯೆಗೆ ಶರಣಾದ ಯುವಕ. ಜಸ್ಟ್ ಕೈ ಹಿಡಿದು ಪಾರ್ಕ್‌ನಲ್ಲಿ ಕುಳಿತಿರುವುದಷ್ಟೇ, ಅದನ್ನೇ ತಪ್ಪಾಗಿ ಬಿಂಬಿಸಿ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಮಾಡುವ ಅವಶ್ಯಕತೆ ಏನಿತ್ತು, ವಿಡಿಯೋ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಯುವಕನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
