ಪ್ರಜ್ವಲ್ ರೇವಣ್ಣ ಅಪರಾಧಿ: ಕೋರ್ಟ್ ತೀರ್ಪು ಸ್ವಾಗತಿಸಿದ ಬಿಜೆಪಿ ಮುಖಂಡ
ಕೆ.ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ನಾಳೆ (ಆಗಸ್ಟ್ 2) ಶಿಕ್ಷೆ ಪ್ರಮಾಣಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆ ನಡೆಸಲಿದೆ. ಇನ್ನು ಕೋರ್ಟ್ ತೀರ್ಪನ್ನು ಹಾಸನ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಸ್ವಾಗತಿಸಿದ್ದು, ಕೋರ್ಟ್ ಗೆ ಧನ್ಯವಾದ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಅಶೀಲ್ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಕೇಸ್ ನಲ್ಲಿ ಇದೇ ದೇವರಾಜೇಗೌಡ ಬಂಧನಕ್ಕೊಳಗಾಗಿದ್ದರು.
ಹಾಸನ, (ಆಗಸ್ಟ್ 02): ಕೆ.ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. ನಾಳೆ (ಆಗಸ್ಟ್ 2) ಶಿಕ್ಷೆ ಪ್ರಮಾಣಕ್ಕೆ ಸಂಬಂಧಿಸಿದಂತೆ ಕೋರ್ಟ್ ವಿಚಾರಣೆ ನಡೆಸಲಿದೆ. ಇನ್ನು ಕೋರ್ಟ್ ತೀರ್ಪನ್ನು ಹಾಸನ ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಸ್ವಾಗತಿಸಿದ್ದು, ಕೋರ್ಟ್ ಗೆ ಧನ್ಯವಾದ ಹೇಳಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಅಶೀಲ್ ವಿಡಿಯೋ ಪೆನ್ ಡ್ರೈವ್ ಹಂಚಿಕೆ ಕೇಸ್ ನಲ್ಲಿ ಇದೇ ದೇವರಾಜೇಗೌಡ ಬಂಧನಕ್ಕೊಳಗಾಗಿದ್ದರು.
ಕೋರ್ಟ್ ತೀರ್ಪಿನ ಬಗ್ಗೆ ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ದೇವರಾಜೇಗೌಡ, ಕಾನೂನಿನ ಮುಂದೆ ಎಲ್ಲರೂ ಒಂದೇ ಎಂದು ಈ ತೀರ್ಪಿನಿಂದ ಸಮಾಜಕ್ಕೆ ಒಂದು ಸಂದೇಶ ಕೊಟ್ಟಂತಾಗಿದ್ದು, ಹಣ ಬಲ ಇದ್ದರೂ ತಪ್ಪು ಮಾಡಿದರೆ ಶಿಕ್ಷೆ ಆಗುತ್ತೆಂಬುದು ಸಾಬೀತಾಗಿದೆ. ಈ ಪ್ರಕರಣದಲ್ಲಿ ಮನೆ ಕೆಲಸದಾಕೆ ಮೇಲೆ ದೌರ್ಜನ್ಯ ಆಗಿತ್ತು. ಆಕೆಗೆ ನ್ಯಾಯ ಸಿಗಬೇಕು ಎಂದು ನಾವೂ ದೇವರಲ್ಲಿ ಬೇಡಿಕೊಂಡಿದ್ದೆವು ಎಂದರು.
ಪ್ರಜ್ವಲ್ ಪರ ವಕೀಲರು ತಾಂತ್ರಿಕ ವಿಚಾರದಲ್ಲಿ ಎಡವಿದಂತೆ ಕಾಣುತ್ತಿದೆ. ಈಗ ಪ್ರಜ್ವಲ್ ಕಣ್ಣೀರು ಹಾಕಿದ್ದಾರೆ ಎಂದು ಪರಿಗಣಿಸಬೇಕಿಲ್ಲ. ಈ ಹಿಂದೆ ಪ್ರಜ್ವಲ್ ರೇವಣ್ಣನಿಂದ ಎಷ್ಟು ಜನ ಕಣ್ಣೀರು ಹಾಕಿದ್ದಾರೆ. ಈ ಪ್ರಕರಣದಲ್ಲಿ ಶಿಕ್ಷೆ ಆಗುತ್ತೆ ಅನ್ನೋದು ಮೊದಲೇ ಗೊತ್ತಿತ್ತು. ಎಸ್ಐಟಿ ಅಧಿಕಾರಿಗಳು ಸಮರ್ಪಕವಾಗಿ ಸಾಕ್ಷಿ ನೀಡಿದ್ದಾರೆ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ.

