ಹಾಸನ: ವೇಗವಾಗಿ ಬಂದು ವಿದ್ಯುತ್ ಕಂಬಕ್ಕೆ ಗುದ್ದಿದ ಕಾರು, ಭಯಾನಕ ವಿಡಿಯೋ ನೋಡಿ
ಹಾಸನ ನಗರದಲ್ಲೊಂದು ಭೀಕರ ಕಾರು ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ದೊಡ್ಡ ದುರಂತವೊಂದು ತಪ್ಪಿದೆ. ಆದಾಗ್ಯೂ, ಕಾರಿನಲ್ಲಿದ್ದ ಕೆಲವು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ವಿದ್ಯುತ್ ಕಂಬಕ್ಕೆ ವೇಗವಾಗಿ ಬಂದು ಡಿಕ್ಕಿಯಾದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.
ಹಾಸನ, ಫೆಬ್ರವರಿ 4: ಹಾಸನದ ಎನ್ಆರ್ ವೃತ್ತದಲ್ಲಿ ಅತಿವೇಗದಿಂದ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಪಕ್ಕಕ್ಕೆ ಜರುಗಿದೆ. ಕಾರು ಬಂದು ಕಂಬಕ್ಕೆ ಡಿಕ್ಕಿ ಹೊಡೆಯುವ ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕುಡಿತ ಅಮಲಿನಲ್ಲಿ ಚಾಲಕ ಅತಿವೇಗವಾಗಿ ಚಲಾಯಿಸಿಕೊಂಡು ಬಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಅದೃಷ್ಟವಶಾತ್, ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ಇಬ್ಬರನ್ನು ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos