AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ವೆ ಇಲಾಖೆ ಅಧಿಕಾರಿಗಳ ಚಳಿ ಬಿಡಿಸಿದ ಹಾಸನ ಡಿಸಿ ಲತಾ ಕುಮಾರಿ !

ಸರ್ವೆ ಇಲಾಖೆ ಅಧಿಕಾರಿಗಳ ಚಳಿ ಬಿಡಿಸಿದ ಹಾಸನ ಡಿಸಿ ಲತಾ ಕುಮಾರಿ !

ಮಂಜುನಾಥ ಕೆಬಿ
| Edited By: |

Updated on: Sep 26, 2026 | 7:41 AM

Share

ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದ ಪ್ರಜಾಸೇವಾ ಆಂದೋಲನದಲ್ಲಿ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಸರ್ವೆ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಕರ್ತವ್ಯಲೋಪ ಎಸಗಿದ ಇಬ್ಬರು ಸರ್ವೇಯರ್‌ಗಳನ್ನು ಅಮಾನತುಗೊಳಿಸಿದ್ದು, ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ಒಂದು ವಾರದೊಳಗೆ ಇತ್ಯರ್ಥಪಡಿಸುವಂತೆ ಖಡಕ್ ಸೂಚನೆ ನೀಡಿದ್ದಾರೆ.

ಹಾಸನ, ಸೆಪ್ಟೆಂಬರ್ 26: ಜಿಲ್ಲೆಯ ಸಕಲೇಶಪುರದಲ್ಲಿ ನಡೆದ ‘ಪ್ರಜಾಸೇವಾ’ ಆಂದೋಲನದಲ್ಲಿ ಸಾರ್ವಜನಿಕರಿಂದ ಸಾಲು ಸಾಲು ದೂರುಗಳು ಬಂದ ಹಿನ್ನೆಲೆಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಲಿಂಗೇಗೌಡ ಅವರ ಸೂಚನೆಯಂತೆ ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ಸರ್ವೆ ಇಲಾಖೆ ಅಧಿಕಾರಿಗಳ ತುರ್ತು ಸಭೆ ನಡೆಸಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಜಿಲ್ಲೆಯ 8 ತಾಲೂಕುಗಳ ಎಡಿಎಲ್ಆರ್, ಸೂಪರ್‌ವೈಸರ್‌ಗಳು ಹಾಗೂ ಸಕಲೇಶಪುರದ ಸಿಬ್ಬಂದಿ ಸಭೆಯಲ್ಲಿ ಡಿಸಿ, “ಸಕಲೇಶಪುರದಲ್ಲಿದ್ದಷ್ಟು ದೂರುಗಳು ಎಲ್ಲಿಯೂ ಬಂದಿಲ್ಲ. ಸಭೆ ಮುಗಿದು 5 ದಿನವಾದರೂ ಅರ್ಜಿಗಳ ಮಾಹಿತಿ ಪಡೆಯದಿರುವುದು ನಾಚಿಕೆಗೇಡಿನ ಸಂಗತಿ” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಕಾರ್ಯವೈಖರಿ ಸುಧಾರಿಸಿಕೊಳ್ಳಲು ಖಡಕ್ ಎಚ್ಚರಿಕೆ ನೀಡಿದ ಡಿಸಿ ಲತಾ ಕುಮಾರಿ, ಎಲ್ಲಾ ಬಾಕಿ ಅರ್ಜಿಗಳನ್ನು 1 ವಾರದಲ್ಲಿ ಇತ್ಯರ್ಥಪಡಿಸಬೇಕೆಂದು ಸೂಚಿಸಿದರು. ಅಲ್ಲದೆ, ಕರ್ತವ್ಯಲೋಪ ಎಸಗಿದ ಸಕಲೇಶಪುರದ ಸರ್ವೇಯರ್‌ಗಳಾದ ಮನುಕುಮಾರ್ ಮತ್ತು ಗಿರೀಶ್ ಅವರನ್ನು ಸ್ಥಳದಲ್ಲೇ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More