ಗಾಂಜಾ ಅಮಲಿನಲ್ಲಿ ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಹಾಸನದಲ್ಲಿ ಅಮಲಿನಲ್ಲಿ ಆಟೋ ಚಲಾಯಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ ಯುವಕರಿಗೆ ಸಾರ್ವಜನಿಕರು ಪಾಠ ಕಲಿಸಿದ್ದಾರೆ. ಅಜಾಗರೂಕ ಚಾಲನೆಯಿಂದ ಮೂರು ಬೈಕ್‌ಗಳು ಜಖಂಗೊಂಡು ನಾಲ್ವರಿಗೆ ಗಾಯವಾಗಿದೆ. ಮಾದಕ ದ್ರವ್ಯ ಸೇವನೆ ಶಂಕೆ ವ್ಯಕ್ತವಾಗಿದ್ದು, ಆಟೋ ಚಾಲಕರನ್ನು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಲಾಗಿದೆ. ಆಟೋ ಜಪ್ತಿ ಮಾಡಲಾಗಿದ್ದು, ವೈದ್ಯಕೀಯ ತಪಾಸಣೆ ನಡೆಯುತ್ತಿದೆ.
ಹಾಸನ, ಮಾ.14: ನಗರದ ರಸ್ತೆಗಳಲ್ಲಿ ಅಮಲಿನಲ್ಲಿ ಆಟೋ ಚಲಾಯಿಸಿ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದ ಪುಂಡ ಯುವಕರಿಗೆ ಸಾರ್ವಜನಿಕರು ಸರಿಯಾಗಿಯೇ ಪಾಠ ಕಲಿಸಿದ್ದಾರೆ. ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದು ಅಟ್ಟಹಾಸ ಮೆರೆದ ಯುವಕರನ್ನು ಹಿಡಿದು ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಿನ್ನೆ ಸಂಜೆ ನಡೆದಿದೆ. ಹಾಸನ ನಗರದಲ್ಲಿ ನಿನ್ನೆ ಸಂಜೆ ಆಟೋವೊಂದನ್ನು ಅತೀ ವೇಗವಾಗಿ ಮತ್ತು ಅಜಾಗರೂಕತೆಯಿಂದ ಚಲಾಯಿಸಿದ ಯುವಕರ ತಂಡ, ರಸ್ತೆಯಲ್ಲಿ ಹೋಗುತ್ತಿದ್ದವರ ಮೇಲೆ ಆತಂಕ ಮೂಡಿಸಿದ್ದಾರೆ. ಈ ಪುಂಡರ ಹುಚ್ಚಾಟದಿಂದಾಗಿ ಮೂರು ಬೈಕ್‌ಗಳು ಜಖಂಗೊಂಡಿದ್ದು, ನಾಲ್ವರು ಸಾರ್ವಜನಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯುವಕರು ಗಾಂಜಾ ಅಥವಾ ಇನ್ನಾವುದೇ ಮಾದಕ ದ್ರವ್ಯ ಸೇವಿಸಿ ಆಟೋ ಚಾಲನೆ ಮಾಡುತ್ತಿದ್ದರು ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ. ಅವರ ಅಸಹಜ ನಡವಳಿಕೆಯಿಂದ ಜನರು ಬೆಚ್ಚಿಬಿದ್ದಿದ್ದರು. ಯುವಕರ ಪುಂಡಾಟಿಕೆಯಿಂದ ತಾಳ್ಮೆ ಕಳೆದುಕೊಂಡ ಸಾರ್ವಜನಿಕರು, ಆಟೋವನ್ನು ಬೆನ್ನಟ್ಟಿ ಹಿಡಿದಿದ್ದಾರೆ. ಬಳಿಕ ಮೂವರು ಯುವಕರಿಗೆ ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿ (ಗೂಸಾ ನೀಡಿ) ಹಾಸನ ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.ಸ್ಥಳಕ್ಕೆ ಆಗಮಿಸಿದ ಹಾಸನ ನಗರ ಠಾಣೆಯ ಪೊಲೀಸರು ಪುಂಡರನ್ನು ವಶಕ್ಕೆ ಪಡೆದಿದ್ದಾರೆ. ಆಟೋವನ್ನು ಜಪ್ತಿ ಮಾಡಲಾಗಿದ್ದು, ಯುವಕರು ಮಾದಕ ದ್ರವ್ಯ ಸೇವಿಸಿದ್ದಾರೆಯೇ ಎಂಬ ಬಗ್ಗೆ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
