ಎಣ್ಣೆ ಏಟಲ್ಲಿ ಕಟ್ಟಿಕೊಂಡ ಹೆಂಡತಿಯನ್ನೇ ಚಾಕುವಿನಿಂದ ಇರಿದು ಕೊಂದ ಗಂಡ

Updated on: Sep 11, 2025 | 5:45 PM

ವ್ಯಕ್ತಿಯೊಬ್ಬ ಕುಡಿದ ಮತ್ತಲ್ಲಿ ಕಟ್ಟಿಕೊಂಡ ಹೆಂಡತಿಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದಂತಹ ಆಘಾತಕಾರಿ ಘಟನೆ ಹಾಸನ ಜಿಲ್ಲೆಯ ಚನ್ನರಾಯಣಪಟ್ಟಣ ತಾಲೂಕಿನ ಹಿರಿಸಾವೆ ಎಂಬಲ್ಲಿ ನಡೆದಿದೆ. ಮನೆಯಲ್ಲಿ ಮಕ್ಕಳು ಇಲ್ಲದಿದ್ದ ವೇಳೆ ಆತ ತನ್ನ ಹೆಂಡತಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಹಾಸನ, ಸೆಪ್ಟೆಂಬರ್‌ 11: ಕುಡುಕರು ಕುಡಿದ ಮತ್ತಿನಲ್ಲಿ ಮಾಡುವಂತಹ ಅವಾಂತರಗಳು ಸುದ್ದಿಗಳು ಆಗಾಗ್ಗೆ ಕೇಳಿಬರುತ್ತಿರುತ್ತದೆ. ಇದೀಗ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಎಂಬಲ್ಲಿ ಇಂತಹದ್ದೇ ಆಘಾತಕಾರಿ ಘಟನೆಯೊಂದು ನಡೆದಿದ್ದು, ಕುಡಿದ ಮತ್ತಿನಲ್ಲಿ ಪತಿರಾಯ ತನ್ನ ಪತ್ನಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ರಘು ಎಂಬಾತ ತನ್ನ ಮಕ್ಕಳು ಟ್ಯೂಷನ್‌ಗೆ ಹೋಗಿದ್ದಂತಹ ಸಂದರ್ಭದಲ್ಲಿ ಪತ್ನಿ ರೇಖಾಳನ್ನು (38) ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಪ್ರತಿದಿನ ಕಂಠಪೂರ್ತಿ ಕುಡಿದು ಬಂದು ಹೆಂಡ್ತಿ ಜೊತೆ ಈತ ಜಗಳವಾಡುತ್ತಿದ್ದನು. ಆದರೆ ಇದೀಗ ಈ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ