ಕಾಡಾನೆ ದಾಳಿಗೆ ವ್ಯಕ್ತಿ ಬಲಿ: 1 ತಿಂಗಳಲ್ಲಿ ಎಲ್ಲಾ ಆನೆಗಳನ್ನ ಓಡಿಸುತ್ತೇವೆ ಎಂದ ಸಚಿವ ಶಿವಲಿಂಗೇಗೌಡ

Edited By:

Updated on: Nov 16, 2026 | 7:45 PM

ಹಾಸನ ಜಿಲ್ಲೆಯ ಬೇಲೂರಿನಲ್ಲಿ ಕಾಡಾನೆ ದಾಳಿ ಸಮಸ್ಯೆಗೆ ಪರಿಹಾರವಾಗಿ, ಸಚಿವ ಶಿವಲಿಂಗೇಗೌಡರು 30 ದಿನಗಳೊಳಗೆ ಎಲ್ಲಾ ಆನೆಗಳನ್ನು ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಭರವಸೆ ನೀಡಿದ್ದಾರೆ. ಈ ಕಾರ್ಯಾಚರಣೆಯು ನಾಳೆಯಿಂದಲೇ ಆರಂಭವಾಗಲಿದ್ದು, ಅರಣ್ಯ ಇಲಾಖೆ, ಪೊಲೀಸರು ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ನಡೆಯಲಿದೆ. ಪುಂಡಾನೆಗಳನ್ನು ಹಿಡಿದು, ಉಳಿದ ಆನೆಗಳನ್ನು ಸ್ಥಳಾಂತರ ಮಾಡಲಾಗುವುದು.

ಹಾಸನ, ನವೆಂಬರ್​​ 16: ನಾಗೇನಹಳ್ಳಿಯಲ್ಲಿ ಕಾಡಾನೆ ದಾಳಿಗೆ 55 ವರ್ಷದ ಹಫೀಜ್ ಸಾವನ್ನಪ್ಪಿದ್ದು, ಜಿಲ್ಲೆಯ ಬೇಲೂರಿನಲ್ಲಿ ಅವರ ಶವವಿಟ್ಟು ಪ್ರತಿಭಟನೆ ಮಾಡಲಾಗಿದೆ. ಹೀಗಾಗಿ ಘಟನಾ ಸ್ಥಳಕ್ಕೆ ಸಚಿವ ಕೆ.ಎಂ.ಶಿವಲಿಂಗೇಗೌಡ ಭೇಟಿ ನೀಡಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಒಂದು ತಿಂಗಳಲ್ಲಿ ಎಲ್ಲಾ 56 ಆನೆಗಳನ್ನೂ ಭದ್ರಾ ಅಭಯಾರಣ್ಯಕ್ಕೆ ಓಡಿಸುತ್ತೇವೆ. 10 ಆನೆ ಅಲ್ಲ, 56 ಆನೆಗಳನ್ನು ಓಡಿಸಲು ಆದೇಶ ಆಗಿದೆ ಎಂದು ಘೋಷಿಸಿದರು. ಮೊದಲು ಹತ್ತು ಆನೆ ಎಂದು ಹೇಳಿದ್ರು, ನಾವು ಒಪ್ಪಲಿಲ್ಲ. ಹೀಗಾಗಿ 56 ಆನೆಗಳು ಎಂದು ತೀರ್ಮಾನ ಮಾಡಿದ್ದೇವೆ. ಎಲ್ಲಾ ಆನೆಗಳನ್ನ ನಾವು ಬೇಲೂರಿನಿಂದ ಓಡಿಸುತ್ತೇವೆ’ ಎಂದಿದ್ದಾರೆ. ಇನ್ನು ಸಚಿವರ ಭರವಸೆ ಬೆನ್ನಲ್ಲೇ ಹೋರಾಟಗಾರರು ಪ್ರತಿಭಟನೆ ಹಿಂಪಡೆದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Nov 16, 2026 07:34 PM
Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More