ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್: ಶ್ರೇಯಸ್ ಪಟೇಲ್ ಶಾಲೆಗೆ ದಿಢೀರ್ ಭೇಟಿ
ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ನಗರನಹಳ್ಳಿಯ ಸರ್ಕಾರಿ ಪ್ರೌಡ ಶಾಲೆಯಲ್ಲಿ ಶಿಕ್ಷಕರ ತೀವ್ರ ಕೊರತೆಯಿಂದಾಗಿ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಾಲ್ಕು ವಿಷಯಗಳಿಗೆ ಶಿಕ್ಷಕರಿಲ್ಲದಿರುವುದನ್ನು ಒತ್ತಿಹೇಳಿ ವಿದ್ಯಾರ್ಥಿಗಳ ವಿಡಿಯೋವೊಂದು ವೈರಲ್ ಆಗಿತ್ತು. ಈ ಹಿನ್ನೆಲೆ ಸಂಸದ ಶ್ರೇಯಸ್ ಪಟೇಲ್ ಶಾಲೆಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿ, ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ತಾತ್ಕಾಲಿಕ ಪರಿಹಾರಕ್ಕೆ ಸೂಚಿಸಿದ್ದಾರೆ.
ಹಾಸನ, ಡಿಸೆಂಬರ್ 28: ಜಿಲ್ಲೆಯ ಹೊಳೆನರಸೀಪುರ ತಾಲ್ಲೂಕಿನ ನಗರನಹಳ್ಳಿಯ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರ ಕೊರತೆ ಬಗ್ಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಯ ವಿಡಿಯೋ ವೈರಲ್ ಆಗಿತ್ತು. ವಿಡಿಯೋ ವೈರಲ್ ಆಗುತ್ತಿದ್ದಂತೆ ಶಾಲೆಗೆ ಸಂಸದ ಶ್ರೇಯಸ್ ಪಟೇಲ್ (Shreyas Patel) ಭೇಟಿ ನೀಡಿದ್ದಾರೆ. ಶಿಕ್ಷಕರ ಕೊರತೆ ಬಗ್ಗೆ ಶಿಕ್ಷಕರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಪರೀಕ್ಷೆ ಸಮಯವಾದ್ದರಿಂದ ತಾತ್ಕಾಲಿಕ ವ್ಯವಸ್ಥೆ ಮಾಡುವಂತೆ ಸೂಚನೆ ನೀಡಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.