ಹಾಸನಾಂಬ ದರ್ಶನಕ್ಕೆ ಇಂದೇ ಕೊನೆದಿನ: ಹರಿದು ಬಂದ ಭಕ್ತ ಸಾಗರ, ಇಲ್ಲಿದೆ ನೋಡಿ ನೇರಪ್ರಸಾರ
ರಾಜ್ಯದ ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನೋತ್ಸವ ಅಂತಿಮ ಘಟ್ಟ ತಲುಪಿದ್ದು, ಅಮ್ಮನ ದರ್ಶನಕ್ಕೆ ಇಂದು(ಅಕ್ಟೋಬರ್ 22) ಕೊನೆ ದಿನವಾಗಿದೆ. ಹೀಗಾಗಿ ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಅಕ್ಟೋಬರ್ 10 ರಿಂದ ಹಾಸನಾಂಬೆ ದೇವಿ ದರ್ಶನ ಪ್ರಾರಂಭವಾದಾಗಿನಿಂದ ಅಕ್ಟೋಬರ್ 20ರವರೆಗೆ ಒಟ್ಟು 24 ಲಕ್ಷಕ್ಕೂ ಅಧಿಕ ಭಕ್ತರು ದೇವಿ ದರ್ಶನ ಪಡೆದುಕೊಂಡಿದ್ದಾರೆ. ಇತಿಹಾಸದಲ್ಲೇ ಇದೇ ಮೊದಲ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದಾರೆ ಎನ್ನುವ ದಾಖಲೆ ಸೃಷ್ಟಿಯಾಗಿದೆ. ಇಂದು ಕೊನೆ ದಿನವಾಗಿದ್ದರಿಂದ ಮುಂಜಾನೆ 6 ಗಂಟೆಯಿಂದಲೂ ಭಕ್ತರ ದಂಡು ಪ್ರವಾಹ ರೂಪದಲ್ಲಿ ಹರಿದುಬರುತ್ತಿದೆ.
ಹಾಸನ, (ಅಕ್ಟೋಬರ್ 22): ರಾಜ್ಯದ ಪ್ರಸಿದ್ಧ ಹಾಸನಾಂಬೆ ದೇವಿಯ ದರ್ಶನೋತ್ಸವ ಅಂತಿಮ ಘಟ್ಟ ತಲುಪಿದ್ದು, ಅಮ್ಮನ ದರ್ಶನಕ್ಕೆ ಇಂದು(ಅಕ್ಟೋಬರ್ 22) ಕೊನೆ ದಿನವಾಗಿದೆ. ಹೀಗಾಗಿ ವರ್ಷಕ್ಕೊಮ್ಮೆ ದರ್ಶನ ಕೊಡುವ ಹಾಸನಾಂಬೆ ಜಾತ್ರಾ ಮಹೋತ್ಸವಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ. ಅಕ್ಟೋಬರ್ 10 ರಿಂದ ಹಾಸನಾಂಬೆ ದೇವಿ ದರ್ಶನ ಪ್ರಾರಂಭವಾದಾಗಿನಿಂದ ಅಕ್ಟೋಬರ್ 20ರವರೆಗೆ ಒಟ್ಟು 24 ಲಕ್ಷಕ್ಕೂ ಅಧಿಕ ಭಕ್ತರು ದೇವಿ ದರ್ಶನ ಪಡೆದುಕೊಂಡಿದ್ದಾರೆ. ಇತಿಹಾಸದಲ್ಲೇ ಇದೇ ಮೊದಲ ಬಾರಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡಿದ್ದಾರೆ ಎನ್ನುವ ದಾಖಲೆ ಸೃಷ್ಟಿಯಾಗಿದೆ. ಇಂದು ಕೊನೆ ದಿನವಾಗಿದ್ದರಿಂದ ಮುಂಜಾನೆ 6 ಗಂಟೆಯಿಂದಲೂ ಭಕ್ತರ ದಂಡು ಪ್ರವಾಹ ರೂಪದಲ್ಲಿ ಹರಿದುಬರುತ್ತಿದೆ.
Published on: Oct 22, 2025 08:42 AM

