ಭಾರಿ ಮಳೆಯಿಂದ ಶಿರಾಡಿ ಘಾಟ್ ರಸ್ತೆಯಲ್ಲಿ ಭೂ ಕುಸಿತ: ಈ ಮಾರ್ಗದಲ್ಲಿ ಸಂಚರಿಸುವವರೇ ಎಚ್ಚರ
ಹಾಸನ ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಅಪಾರ ಮಳೆಯಿಂದ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಸಕಲೇಶಪುರ ತಾಲ್ಲೂಕಿನ ದೋಣಿಗಾಲ್ ಬಳಿ ಈ ಘಟನೆ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ 75ರ ಸಂಚಾರಕ್ಕೆ ಅಡ್ಡಿಯಾಗಿದೆ. ಭಾರಿ ಮಳೆಯಿಂದಾಗಿ ಮಣ್ಣು ಕುಸಿದು ರಸ್ತೆ ಮುಚ್ಚಿಹೋಗಿದೆ. ವಾಹನ ಸವಾರರು ಎಚ್ಚರಿಕೆಯಿಂದ ಓಡಾಡಬೇಕಿದೆ.
ಹಾಸನ, ಮೇ 25: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹಿನ್ನೆಲೆ ಶಿರಾಡಿ ಘಾಟ್ ರಸ್ತೆಯಲ್ಲಿ ಭೂ ಕುಸಿತ (Shiradi Ghat Landslide) ಉಂಟಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಣ್ಣು ಕುಸಿದಿದೆ. ತಡೆಗೋಡೆ ನಿರ್ಮಿಸಿದ್ದರು ರಸ್ತೆ ಮೇಲೆ ಮಣ್ಣು ಕುಸಿದಿದ್ದು, ಮಣ್ಣಿನ ಸಮೇತ ಮರಗಳು ನೆಲಕ್ಕೆ ಉರುಳುತ್ತಿವೆ. ವೀಕೆಂಡ್ ಹಿನ್ನೆಲೆ ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಳವಾಗಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

ನಟಿ ರಚಿತಾ ರಾಮ್ ವಿರುದ್ಧ ಕ್ರಮ ಕೈಗೊಳ್ಳುತ್ತಾ ಚಲನಚಿತ್ರ ವಾಣಿಜ್ಯ ಮಂಡಳಿ?

ಪ್ರಕೃತಿಯ ಶಕ್ತಿ ಮುಂದೆ ನಾವೇನೂ ಅಲ್ಲ!; ಈ ವಿಡಿಯೋ ನೋಡಿ

ಕನ್ನಡ ಸಿನಿಮಾಗೆ ಬೆಳಗ್ಗೆ 9.30ರ ಶೋ ಕೊಟ್ಟರೆ ಜನ ಬರಲ್ಲ: ಶ್ರೀನಗರ ಕಿಟ್ಟಿ

ಬಿಹಾರದಲ್ಲಿ ಭಾರೀ ಮಳೆಯಿಂದ ಆರೆಂಜ್ ಅಲರ್ಟ್ ಘೋಷಣೆ; 14 ಜನರು ಸಾವು
