ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ: ಈ ಮಾರ್ಗದಲ್ಲಿ ಸಂಚರಿಸುವವರೇ ಎಚ್ಚರ

Edited By:

Updated on: May 25, 2025 | 12:40 PM

ಹಾಸನ ಜಿಲ್ಲೆಯ ಮಲೆನಾಡು ಪ್ರದೇಶದಲ್ಲಿ ಅಪಾರ ಮಳೆಯಿಂದ ಶಿರಾಡಿಘಾಟ್ ರಸ್ತೆಯಲ್ಲಿ ಭೂಕುಸಿತ ಸಂಭವಿಸಿದೆ. ಸಕಲೇಶಪುರ ತಾಲ್ಲೂಕಿನ ದೋಣಿಗಾಲ್ ಬಳಿ ಈ ಘಟನೆ ನಡೆದಿದ್ದು, ರಾಷ್ಟ್ರೀಯ ಹೆದ್ದಾರಿ 75ರ ಸಂಚಾರಕ್ಕೆ ಅಡ್ಡಿಯಾಗಿದೆ. ಭಾರಿ ಮಳೆಯಿಂದಾಗಿ ಮಣ್ಣು ಕುಸಿದು ರಸ್ತೆ ಮುಚ್ಚಿಹೋಗಿದೆ. ವಾಹನ ಸವಾರರು ಎಚ್ಚರಿಕೆಯಿಂದ ಓಡಾಡಬೇಕಿದೆ.

ಹಾಸನ, ಮೇ 25: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹಿನ್ನೆಲೆ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ (Shiradi Ghat Landslide) ಉಂಟಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಮಣ್ಣು ಕುಸಿದಿದೆ.  ತಡೆಗೋಡೆ ನಿರ್ಮಿಸಿದ್ದರು ರಸ್ತೆ ಮೇಲೆ ಮಣ್ಣು ಕುಸಿದಿದ್ದು, ಮಣ್ಣಿನ ಸಮೇತ ಮರಗಳು ನೆಲಕ್ಕೆ ಉರುಳುತ್ತಿವೆ. ವೀಕೆಂಡ್ ಹಿನ್ನೆಲೆ ಶಿರಾಡಿಘಾಟ್​ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಳವಾಗಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More