ಹುಡಾ ಅಧ್ಯಕ್ಷ ಸ್ಥಾನಕ್ಕೆ ಬೀದಿಗಿಳಿದ ಮುಸ್ಲಿಂ: ಪ್ರತಿಭಟನೆ ಬಳಿಕ ಹಣ ಕೊಟ್ಟಿಲ್ಲವೆಂದು ಕಾರ್ಮಿಕರ ಆರೋಪ
ಹಾಸನದಲ್ಲಿ ಹುಡಾ ಅಧ್ಯಕ್ಷ ಸ್ಥಾನ ಮುಸ್ಲಿಂ ಸಮುದಾಯಕ್ಕೆ ನೀಡಬೇಕೆಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಗೆ ಕರೆತಂದ ಕಾರ್ಮಿಕರಿಗೆ 300 ರೂಪಾಯಿ ಮತ್ತು ಊಟದ ಭರವಸೆ ನೀಡಿ ಮೋಸ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಕಾರ್ಮಿಕರು ಮುಖಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯಿಂದ ಹಾಸನ ನಗರದಲ್ಲಿ ಭಾರಿ ಆಕ್ರೋಶ ಉಂಟಾಗಿದೆ.
ಹಾಸನ, ಆಗಸ್ಟ್ 06: ಹಾಸನ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾದಿಗೆ ಜಟಾಪಟಿ ಜೋರಾಗಿದೆ. ಹುಡಾ ಅಧ್ಯಕ್ಷ ಸ್ಥಾನ ಮುಸ್ಲಿಂ ಸಮುದಾಯಕ್ಕೆ ನೀಡುವಂತೆ ಹಾಸನದಲ್ಲಿ ಮುಸ್ಲಿಂ ಸಂಘಟನೆಗಳ ನೇತೃತ್ವದಲ್ಲಿ ಹೇಮಾವತಿ ಪ್ರತಿಮೆಯಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನೆ ನಡೆಯಿತು. ಪ್ರತಿಭಟನೆಗೆ ಕಾರ್ಮಿಕರನ್ನು ಕರೆದುಕೊಂಡು ಬರಲಾಗಿತ್ತು. ಪ್ರತಿಭಟನೆಯಲ್ಲಿ ಭಾಗವಿಹಿಸಿದರೇ ಹಣ ನೀಡಲಾಗುತ್ತದೆ ಎಂದು ಕಾರ್ಮಿಕರಿಗೆ ಹೇಳಲಾಗಿತ್ತಂತೆ. ಕಾರ್ಮಿಕರಿಗೆ ಹಣ ನೀಡದೆ ಮೋಸ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರತಿಭಟನೆಗೆ ಕರೆದುಕೊಂಡು ಬಂದ ಮುಖಂಡರ ವಿರುದ್ಧ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು. ಊಟ, ತಿಂಡಿ ಕೊಟ್ಟು ತಲಾ 300 ರೂ. ಹಣ ನೀಡುವುದಾಗಿ ಕರೆದೊಯ್ದು ಮೋಸ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಹಣ ಇರಲಿ ಊಟ, ತಿಂಡಿ, ಕುಡಿಯಲು ನೀರೂ ಕೊಟ್ಟಿಲ್ಲ ಎಂದು ಅಸಮಧಾನ ಹೊರ ಹಾಕಿದ್ದಾರೆ.
ಚಿನ್ನದಂಗಡಿ ದೋಚಿ ಬಸ್ ಸ್ಟ್ಯಾಂಡ್ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ

