ಹಾಸನ ನಿಗೂಢ ಸ್ಫೋಟ: ಚಿಕಿತ್ಸೆ ಫಲಕಾರಿಯಾಗದೆ ದಂಪತಿ ಸಾವು, 14 ತಿಂಗಳ ಮಗು ಅನಾಥ

Edited By:

Updated on: Oct 01, 2025 | 11:05 AM

ಹಾಸನ ಜಿಲ್ಲೆಯ ಹಳೇಆಲೂರಿನಲ್ಲಿ ಸಂಭವಿಸಿದ ನಿಗೂಢ ಸ್ಫೋಟ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸೋಮವಾರ ರಾತ್ರಿ ನಡೆದ ಈ ದುರ್ಘಟನೆಯಲ್ಲಿ ದಂಪತಿ ಗಂಭೀರ ಗಾಯಗೊಂಡಿದ್ದರು. ತಂದೆ-ತಾಯಿ ಸಾವಿನಿಂದಾಗಿ ಹದಿನಾಲ್ಕು ತಿಂಗಳ ಮಗು ಅನಾಥವಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಹಾಸನ, ಅಕ್ಟೋಬರ್​ 01: ಜಿಲ್ಲೆಯ ಹಳೇಆಲೂರು ಪಟ್ಟಣದಲ್ಲಿ ಸಂಭವಿಸಿದ ನಿಗೂಢ ಸ್ಫೋಟ (Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರ ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಿರುವಂತಹ ಘಟನೆ ನಡೆದಿದೆ. ಸೋಮವಾರ ರಾತ್ರಿ ಹಾಸನದ ಹಿಮ್ಸ್‌ ಆಸ್ಪತ್ರೆಗೆ ದಾಖಲಾಗಿದ್ದ ಸುದರ್ಶನ್(32) ಮತ್ತು ಕಾವ್ಯಾ(27) ಮೃತ ದಂಪತಿ. ತಂದೆ-ತಾಯಿ ಸಾವಿನಿಂದಾಗಿ ಹದಿನಾಲ್ಕು ತಿಂಗಳ ಮಗು ಅನಾಥವಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನ ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More