ರಜೆ ಮುಗಿಸಿ ಬೆಂಗಳೂರಿಗೆ ಬರ್ತಿರೋ ಜನರು; ಹಾಸನ-ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ಫುಲ್​ ಜಾಮ್​

ರಜೆ ಮುಗಿಸಿ ಬೆಂಗಳೂರಿಗೆ ಬರ್ತಿರೋ ಜನರು; ಹಾಸನ-ನೆಲಮಂಗಲ ರಾಷ್ಟ್ರೀಯ ಹೆದ್ದಾರಿ ಫುಲ್​ ಜಾಮ್​

ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 28, 2024 | 7:26 PM

ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಜನರು ತಮ್ಮೂರುಗಳಿಗೆ ತೆರಳಿದ್ದರು. ಈಗ ನಾಳೆಯಿಂದ ಎಂದಿನಂತೆ ಕೆಲಸಕ್ಕೆ ಹೋಗಬೇಕಾಗಿರುವುದರಿಂದ ಎಲ್ಲರೂ ತಮ್ಮ ತಮ್ಮ ಊರುಗಳಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇದರಿಂದ ಹಾಸನ-ನೆಲಮಂಗಲ ರಾಷ್ಟ್ರೀಯ ಹೆದ್ದಾರಿ75ರಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್​ ಜಾಮ್(Traffic Jam) ಉಂಟಾಗಿದೆ.

ಬೆಂಗಳೂರು ಗ್ರಾಮಾಂತರ, ಜ.28: ಶುಕ್ರವಾರ ಗಣರಾಜ್ಯೋತ್ಸವ, ಶನಿವಾರ ಹಾಗೂ ಭಾನುವಾರ ಮೂರು ದಿನಗಳ ಕಾಲ ರಜೆ ಇದ್ದ ಕಾರಣ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿರುವ ಜನರು ತಮ್ಮೂರುಗಳಿಗೆ ತೆರಳಿದ್ದರು. ಈಗ ನಾಳೆಯಿಂದ ಎಂದಿನಂತೆ ಕೆಲಸಕ್ಕೆ ಹೋಗಬೇಕಾಗಿರುವುದರಿಂದ ಎಲ್ಲರೂ ತಮ್ಮ ತಮ್ಮ ಊರುಗಳಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಇದರಿಂದ ಹಾಸನ-ನೆಲಮಂಗಲ ರಾಷ್ಟ್ರೀಯ ಹೆದ್ದಾರಿ75ರಲ್ಲಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್​ ಜಾಮ್(Traffic Jam) ಉಂಟಾಗಿದೆ. ಇದರ ಜೊತೆಗೆ ಟ್ರಾಫಿಕ್ ನಿಯಂತ್ರಣ ಮಾಡುವ ಸಲುವಾಗಿ ನೆಲಮಂಗಲ ಸಂಚಾರಿ ಪೊಲೀಸರು ಹರಸಾಹಸ ಪಡುವಂತಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ ಮಾಡಿ