Video: ಶಾರ್ಟ್ ಸರ್ಕ್ಯೂಟ್‌ನಿಂದ ಕೆಎಸ್‌ಆರ್‌ಟಿಸಿ ಬಸ್ನಲ್ಲಿ ಬೆಂಕಿ: ಪ್ರಯಾಣಿಕರು ಪಾರು
Fire Accident: ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಬಳಿ ಶಾರ್ಟ್ ಸರ್ಕ್ಯೂಟ್‌ನಿಂದ ಕೆಎಸ್‌ಆರ್‌ಟಿಸಿ ಬಸ್ ಇಂಜಿನ್ ಬಳಿ ಬೆಂಕಿ ಕಾಣಿಸಿಕೊಂಡಿರುವಂತಹ ಘಟನೆ ನಡೆದಿದೆ. ಕೆ.ಆರ್.ಪೇಟೆ ಡಿಪೋಗೆ ಸೇರಿದ ಸಾರಿಗೆ ಬಸ್ ಅವಘಡ ಸಂಭವಿಸಿದ್ದು, ಕೂಡಲೇ ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಚಾಲಕ ಕೆಳಗಿಳಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಹಾಸನ, ನವೆಂಬರ್ 16: ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಬಳಿ ಶಾರ್ಟ್ ಸರ್ಕ್ಯೂಟ್‌ನಿಂದ ಕೆಎಸ್‌ಆರ್‌ಟಿಸಿ ಬಸ್ ಇಂಜಿನ್ ಬಳಿ ಬೆಂಕಿ (Fire Accident) ಕಾಣಿಸಿಕೊಂಡಿರುವಂತಹ ಘಟನೆ ನಡೆದಿದೆ. ಕೆ.ಆರ್.ಪೇಟೆ ಡಿಪೋಗೆ ಸೇರಿದ KA-11 F-0305 ನಂಬರ್‌ನ ಸಾರಿಗೆ ಬಸ್ ಅವಘಡ ಸಂಭವಿಸಿದ್ದು, ಕೂಡಲೇ ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಚಾಲಕ ಕೆಳಗಿಳಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಕಂಡುಬಂದಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
