Video: ಶಾರ್ಟ್ ಸರ್ಕ್ಯೂಟ್​ನಿಂದ ಕೆಎಸ್‌ಆರ್‌ಟಿಸಿ ಬಸ್​ನಲ್ಲಿ ಬೆಂಕಿ: ಪ್ರಯಾಣಿಕರು ಪಾರು

Edited By:

Updated on: Nov 16, 2023 | 8:26 PM

Fire Accident: ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಬಳಿ ಶಾರ್ಟ್ ಸರ್ಕ್ಯೂಟ್‌ನಿಂದ ಕೆಎಸ್‌ಆರ್‌ಟಿಸಿ ಬಸ್​​ ಇಂಜಿನ್ ಬಳಿ ಬೆಂಕಿ ಕಾಣಿಸಿಕೊಂಡಿರುವಂತಹ ಘಟನೆ ನಡೆದಿದೆ. ಕೆ.ಆರ್.ಪೇಟೆ ಡಿಪೋಗೆ ಸೇರಿದ ಸಾರಿಗೆ ಬಸ್​​ ಅವಘಡ ಸಂಭವಿಸಿದ್ದು, ಕೂಡಲೇ ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಚಾಲಕ ಕೆಳಗಿಳಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಹಾಸನ, ನವೆಂಬರ್​ 16: ಹೊಳೆನರಸೀಪುರ ತಾಲೂಕಿನ ತಟ್ಟೆಕೆರೆ ಬಳಿ ಶಾರ್ಟ್ ಸರ್ಕ್ಯೂಟ್‌ನಿಂದ ಕೆಎಸ್‌ಆರ್‌ಟಿಸಿ ಬಸ್​​ ಇಂಜಿನ್ ಬಳಿ ಬೆಂಕಿ (Fire Accident) ಕಾಣಿಸಿಕೊಂಡಿರುವಂತಹ ಘಟನೆ ನಡೆದಿದೆ. ಕೆ.ಆರ್.ಪೇಟೆ ಡಿಪೋಗೆ ಸೇರಿದ KA-11 F-0305 ನಂಬರ್‌ನ ಸಾರಿಗೆ ಬಸ್​​ ಅವಘಡ ಸಂಭವಿಸಿದ್ದು, ಕೂಡಲೇ ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಚಾಲಕ ಕೆಳಗಿಳಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬಳಿಕ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಕಂಡುಬಂದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More