ವಿಡಿಯೋ ಪ್ರಕರಣ: ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣನ ಬಗ್ಗೆ ಬಿಗ್ ಅಪ್ಡೇಟ್

|

Updated on: May 12, 2024 | 3:26 PM

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಗಿಂಕ ಕಿರುಕುಳ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಆದ್ರೆ, ಅತ್ತ ವಿದೇಶದಲ್ಲೇ ಕುಳಿತುಕೊಂಡು ಪ್ರಜ್ವಲ್ ರೇವಣ್ಣ ಕಣ್ಣಾಮುಚ್ಚಾಲೆ ಆಟವಾಡುತ್ತಿದ್ದಾರೆ. ಜರ್ಮನಿಯಿಂದ ಬೆಂಗಳೂರಿಗೆ ಬರಲು ವಿಮಾನ ಟಿಕೆಟ್​ ಬುಕ್ ಮಾಡುವುದು ಬಳಿಕ ಅದನ್ನು ಕ್ಯಾನ್ಸಲ್​ ಮಾಡುತ್ತಿದ್ದಾರೆ.

ಬೆಂಗಳೂರು, (ಮೇ 12): ಹಾಸನ ಸಂಸದ ಪ್ರಜ್ವಲ್ ರೇವಣ್ಣ ಲೈಗಿಂಕ ಕಿರುಕುಳ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಎಸ್​ಐಟಿ ಅಧಿಕಾರಿಗಳು ತನಿಖೆ ಚುರುಗೊಳಿಸಿದ್ದಾರೆ. ಇತ್ತ ರಾಜ್ಯ ರಾಜಕಾರಣದಲ್ಲಿ ಪ್ರಜ್ವಲ್ ವಿಡಿಯೋ ಬಗ್ಗೆ ಕಾಂಗ್ರೆಸ್, ಜೆಡಿಎಸ್ ನಾಯಕರ ನಡುವೆ ಆರೋಪ ಪ್ರತ್ಯಾರೋಪಗಳು ಜೋರಾಗಿವೆ. ಆದ್ರೆ, ಪ್ರಕರಣ ಆರೋಪಿ ಪ್ರಜ್ವಲ ರೇವಣ್ಣ ಮಾತ್ರ ವಿದೇಶದಲ್ಲಿ ತಲೆಮರೆಸಿಕೊಂಡಿದ್ದು, ಇಂದು ಬರಹುದು ನಾಳೆ ಬರಹುದು ಎಂದು ಎಸ್​ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ. ಈಗಾಗಲೇ ಜರ್ಮನಿಯಿಂದ ಬೆಂಗಳೂರಿಗೆ ಬರಲು ಬುಕ್ ಮಾಡಿದ್ದ ವಿಮಾನ ಟಿಕೆಟ್​ ಅನ್ನು ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಅಲ್ಲದೇ ಇದೀಗ ಮೇ 14ರಂದು ಬುಕ್ ಮಾಡಿದ್ದ ಟಿಕೆಟ್ ಅನ್ನು ಸಹ ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ನಾಳೆ ಅಂದ್ರೆ ಮೇ 13ರಂದು ತಂದೆ ರೇವಣ್ಣರ ಜಾಮೀನು ನೋಡಿ ಮುಂದಿನ ನಿರ್ಧಾರ ಕೈಗೊಳ್ಳಲು ಪ್ರಜ್ವಲ್ ಪ್ಲಾನ್ ಮಾಡಿಕೊಂಡಿದ್ದಾರೆ. ಒಂದು ವೇಳೆ ತಂದೆಗೆ ಜಾಮೀನು ಸಿಕ್ಕರೆ ಬೆಂಗಳೂರಿಗೆ ಬರುವ ಸಾಧ್ಯತೆಗಳಿವೆ. ಇಲ್ಲದಿದ್ದರೆ ಇನ್ನೊಂದಷ್ಟು ದಿನ ವಿದೇಶದಲ್ಲೇ ಠಿಕಾಣಿ ಹೂಡಲಿದ್ದಾರೆ.

Published on: May 12, 2024 03:26 PM