ಹಾಸನ: ಕೆಂಚಟ್ಟಹಳ್ಳಿ ಫ್ಲೈಓವರ್ ಮೇಲೆ ಟ್ಯಾಂಕರ್ ಪಲ್ಟಿ, ರಸ್ತೆಯಲ್ಲಿ ಹರಿದ ಸಾವಿರಾರು ಲೀಟರ್ ಪೆಟ್ರೋಲ್

Edited By:

Updated on: Sep 12, 2026 | 12:57 PM

ಹಾಸನ ಹೊರವಲಯದ ಕೆಂಚಟ್ಟಹಳ್ಳಿ ಫ್ಲೈಓವರ್ ಮೇಲೆ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿ, ಸಾವಿರಾರು ಲೀಟರ್ ಇಂಧನ ರಸ್ತೆಯಲ್ಲಿ ಹರಿದಿದೆ. ಅಗ್ನಿ ಅವಘಡದ ಆತಂಕದಿಂದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಮೇಲ್ಸೇತುವೆ ರಸ್ತೆ ಮೇಲೆ ಸಂಚಾರ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಹಾಸನ, ಸೆಪ್ಟೆಂಬರ್ 12: ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿ, ಸಾವಿರಾರು ಲೀಟರ್ ಇಂಧನ ರಸ್ತೆಯಲ್ಲಿ ಹರಿದ ಘಟನೆ ನಡೆದಿದೆ. ಕೆಂಚಟ್ಟಹಳ್ಳಿ ಫ್ಲೈಓವರ್ ಮೇಲೆ ಈ ಘಟನೆ ಸಂಭವಿಸಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಬಿಸಿಲಿನ ತೀವ್ರತೆ ಹೆಚ್ಚಾಗಿರುವುದರಿಂದ ರಸ್ತೆಯಲ್ಲಿ ಸೋರಿಕೆಯಾಗಿರುವ ಪೆಟ್ರೋಲ್‌ಗೆ ಬೆಂಕಿ ಹೊತ್ತಿಕೊಂಡು ಅಗ್ನಿ ಅವಘಡ ಸಂಭವಿಸುವ ಭೀತಿ ಎದುರಾಗಿದೆ. ಹಬ್ಬದ ಪ್ರಯುಕ್ತ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದರೂ, ಸುದ್ದಿ ತಿಳಿದ ತಕ್ಷಣ ಹಾಸನ ಸಂಚಾರಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. ಅನಾಹುತ ತಪ್ಪಿಸಲು ಕೆಂಚಟ್ಟಹಳ್ಳಿ ಫ್ಲೈಓವರ್ ಮೇಲಿನ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಪ್ರಸ್ತುತ ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ಇಂಧನ ಸೋರಿಕೆ ನಿಯಂತ್ರಿಸುವ ಹಾಗೂ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us