ಹಾಸನದ ಹಲವೆಡೆ ಧಾರಾಕಾರ ಮಳೆ; ನೀರಿನಲ್ಲಿ ಸಿಲುಕಿದ ವಾಹನಗಳು
ಇಂದು ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ಅದರಂತೆ ಹಾಸನ(Hassan) ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಸುರಿದಿದ್ದು, ಮಳೆಯಿಂದ ಅವಾಂತರಗಳಾಗಿವೆ. ಕಳೆದ ಒಂದು ಗಂಟೆಯಿಂದ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಜನ ಕಂಗಾಲಾಗಿದ್ದಾರೆ. ಇನ್ನು ನಿರಂತರ ಮಳೆಯಿಂದ ರಸ್ತೆಯ ಮೇಲೆ ಒಂದು ಅಡಿಗೂ ಹೆಚ್ಚು ಪ್ರಮಾಣದಲ್ಲಿ ನೀರು ಹರಿಯುತ್ತಿದೆ.
ಹಾಸನ, ಮೇ.19: ಇಂದು ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ. ಅದರಂತೆ ಹಾಸನ(Hassan) ಜಿಲ್ಲೆಯ ಹಲವೆಡೆ ಧಾರಾಕಾರ ಮಳೆ ಸುರಿದಿದ್ದು, ಮಳೆಯಿಂದ ಅವಾಂತರಗಳಾಗಿವೆ. ಕಳೆದ ಒಂದು ಗಂಟೆಯಿಂದ ಸುರಿಯುತ್ತಿರುವ ವರುಣನ ಆರ್ಭಟಕ್ಕೆ ಜನ ಕಂಗಾಲಾಗಿದ್ದಾರೆ. ಇನ್ನು ನಿರಂತರ ಮಳೆಯಿಂದ ರಸ್ತೆಯ ಮೇಲೆ ಒಂದು ಅಡಿಗೂ ಹೆಚ್ಚು ಪ್ರಮಾಣದಲ್ಲಿ ನೀರು ಹರಿಯುತ್ತಿದೆ. ಇದರಿಂದ ಚನ್ನರಾಯಪಟ್ಟಣದ ಬಾಗೂರು ರಸ್ತೆ ಸಂಪೂರ್ಣ ಜಲಾವೃತವಾಗಿದ್ದು, ರಸ್ತೆಯಲ್ಲಿ ಉಕ್ಕಿ ಹರಿಯುತ್ತಿರುವ ನೀರಿನಲ್ಲಿ ವಾಹನಗಳು ಸಿಲುಕಿದೆ. ಇನ್ನು ಹಿಂದೂ ರುದ್ರಭೂಮಿಯ ಸಿಬ್ಬಂದಿ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ಹಾನಿಯಾಗಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: May 19, 2024 08:12 PM
Follow Us
Latest Videos
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
