ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ, ರೈಲು ಸಂಚಾರ ಸ್ಥಗಿತ!

Edited By:

Updated on: Aug 02, 2026 | 4:33 PM

ಮುಖ್ಯಾಂಶಗಳು

  • ಹಾಸನ ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ
  • ಸಕಲೇಶಪುರ ತಾಲೂಕಿನಲ್ಲಿ ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
  • ಸದ್ಯಕ್ಕೆ ರೈಲುಗಳ ಓಡಾಟ ಬಂದ್ ಮಾಡಿರುವ ರೈಲ್ವೆ ಇಲಾಖೆ

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸಕಲೇಶಪುರ ತಾಲ್ಲೂಕಿನ ಯಡಕುಮಾರಿ-ಶಿರವಾಗಿಲು ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದಿದೆ. ಇದರಿಂದ ರೈಲು ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ರೈಲ್ವೆ ಇಲಾಖೆ ಹಿಟಾಚಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸುತ್ತಿದೆ. ಮಳೆ ಮುಂದುವರಿದರೆ ಮತ್ತಷ್ಟು ಗುಡ್ಡ ಕುಸಿಯುವ ಆತಂಕ ಎದುರಾಗಿದೆ.

ಹಾಸನ, ಆಗಸ್ಟ್​​ 02: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಸಕಲೇಶಪುರ ತಾಲೂಕಿನ ಯಡಕುಮಾರಿ ಟು ಶಿರವಾಗಿಲು ನಡುವಿನ ರೈಲ್ವೆ ಹಳಿ ಮೇಲೆ ಗುಡ್ಡ ಕುಸಿದಿರುವಂತಹ ಘಟನೆ ನಡೆದಿದೆ. ರೈಲ್ವೆ ಹಳಿ ಪಕ್ಕದಲ್ಲಿ ಮೇಲಿನಿಂದ‌ ನೀರು ಬೀಳುತ್ತಿದ್ದು, ಇಡೀ ಸ್ಥಳ ಸಂಪೂರ್ಣ ಕೆಸರುಮಯವಾಗಿದೆ. ಧಾರಾಕಾರ ಮಳೆ ನಡುವೆಯೂ ರೈಲ್ವೆ ಸಿಬ್ಬಂದಿ ಹಿಟಾಚಿ ಯಂತ್ರಗಳ ಮೂಲಕ ಮಣ್ಣು ತೆರವುಗೊಳಿಸುವ ಕಾರ್ಯಾಚರಣೆ ಭರದಿಂದ ನಡೆಸಿದ್ದಾರೆ. ಇದೇ ರೀತಿ ಮಳೆ ಮುಂದುವರಿದರೆ ಮತ್ತೆ ಗುಡ್ಡ ಕುಸಿಯುವ ಆತಂಕ ಎದುರಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ತೆರವು ಕಾರ್ಯ ಮುಗಿಯುವವರೆಗೆ ಈ ಮಾರ್ಗದಲ್ಲಿ ರೈಲುಗಳ ಓಡಾಟವನ್ನು ರೈಲ್ವೆ ಇಲಾಖೆ ಸಂಪೂರ್ಣವಾಗಿ ಬಂದ್ ಮಾಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Aug 02, 2026 04:32 PM
Loading...
Unable to load recommendations.
Follow Us