ಹಾಸನ: ಸಕಲೇಶಪುರದಲ್ಲಿ ನೂರಾರು ವೋಟರ್ ಐಡಿ, ಆಧಾರ್ ಹಾಗೂ ಪಾನ್ ಕಾರ್ಡ್‌ಗಳಿಗೆ ಬೆಂಕಿ!

Edited By:

Updated on: Oct 14, 2026 | 12:39 PM

ಹಾಸನ ಜಿಲ್ಲೆಯ ಸಕಲೇಶಪುರದ ಶ್ರೀಗಂಧ ಹೋಟೆಲ್ ಬಳಿ ಅಪರಿಚಿತರು ನೂರಾರು ವೋಟರ್ ಐಡಿ, ಆಧಾರ್ ಮತ್ತು ಪಾನ್ ಕಾರ್ಡ್‌ಗಳನ್ನು ಸುಟ್ಟು ಹಾಕಿರುವ ಆಘಾತಕಾರಿ ಘಟನೆ ನಡೆದಿದೆ. ಹಾಸನ, ಮೈಸೂರು, ಬಳ್ಳಾರಿ ಹಾಗೂ ಆಂಧ್ರಪ್ರದೇಶ ಮೂಲದ ಸಾರ್ವಜನಿಕರ ಪ್ರಮುಖ ದಾಖಲೆಗಳು ಅಗ್ನಿಗಾಹುತಿಯಾಗಿದ್ದು, ಘಟನೆ ಸಂಬಂಧ ಸಕಲೇಶಪುರ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಸಮಗ್ರ ತನಿಖೆ ಆರಂಭಿಸಿದ್ದಾರೆ.

ಹಾಸನ, ಅಕ್ಟೋಬರ್ 14: ಹಾಸನ ಜಿಲ್ಲೆಯ ಸಕಲೇಶಪುರ ನಗರದ ಶ್ರೀಗಂಧ ಹೋಟೆಲ್ ಬಳಿ ಅಪರಿಚಿತ ದುಷ್ಕರ್ಮಿಗಳು ನೂರಾರು ಅಧಿಕೃತ ಗುರುತಿನ ಚೀಟಿಗಳನ್ನು ಸುಟ್ಟು ಹಾಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಸ್ಥಳದಲ್ಲಿ ನೂರಾರು ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಪಾನ್ ಕಾರ್ಡ್ ಹಾಗೂ ಪ್ರಮುಖ ದಾಖಲೆಗಳನ್ನು ಅನಾಮಧೇಯ ವ್ಯಕ್ತಿಗಳು ಅಗ್ನಿಗಾಹುತಿ ಮಾಡಿದ್ದಾರೆ. ಈ ದಾಖಲೆಗಳು ಹಾಸನ, ರಾಮನಗರ, ಕೊಟ್ಟೂರು, ಬಳ್ಳಾರಿ, ವಿಜಯಪುರ, ಮೈಸೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳು ಹಾಗೂ ಆಂಧ್ರಪ್ರದೇಶ ಮೂಲದ ವಿಳಾಸಗಳನ್ನು ಒಳಗೊಂಡಿವೆ. ಸುಟ್ಟು ಹಾಕಿರುವ ಸ್ಥಳದ ಪಕ್ಕದಲ್ಲೇ ಅರ್ಧಂಬರ್ಧ ಸುಟ್ಟಿರುವ ಹಲವು ವೋಟರ್ ಐಡಿ ಹಾಗೂ ಕಾರ್ಡ್‌ಗಳು ಪತ್ತೆಯಾಗಿವೆ.

ಘಟನೆಯನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಸಕಲೇಶಪುರ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಇಷ್ಟೊಂದು ಪ್ರಮಾಣದ ಸಾರ್ವಜನಿಕ ದಾಖಲೆಗಳು ಇಲ್ಲಿಗೆ ಹೇಗೆ ಬಂದವು ಮತ್ತು ಸುಟ್ಟು ಹಾಕಿದ ಉದ್ದೇಶವೇನು ಎಂಬುದರ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಸಕಲೇಶಪುರ ನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More