ಹಾಸನ-ಸೋಲಾಪುರ ಎಕ್ಸ್​ಪ್ರೆಸ್​ ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರ ಪರದಾಟ

Edited By:

Updated on: Jan 19, 2026 | 12:00 PM

ಅದು ಬೆಂಗಳೂರು ಮಾರ್ಗವಾಗಿ ಹಾಸನಕ್ಕೆ ತೆರಳುವ ಹಾಸನ-ಸೋಲಾಪುರ ಎಕ್ಸ್​ಪ್ರೆಸ್ ರೈಲು. ಸೋಮವಾರ ಬೆಳಗ್ಗೆ ಕಲಬುರಗಿ ತಲುಪಿದಾಗ ರೈಲಿನಲ್ಲಿ ನೀರು ಬಾರದೆ ಪ್ರಯಾಣಿಕರು ಪರದಾಡಿದರು. ಎಕ್ಸ್​ಪ್ರೆಸ್ ರೈಲಿನಲ್ಲೂ ಸರಿಯಾದ ವ್ಯವಸ್ಥೆ ಇಲ್ಲದ್ದಕ್ಕೆ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರೈಲಿನಲ್ಲಿ ನೀರಿಲ್ಲದೆ ಪ್ರಯಾಣಿಕರು ಒದ್ದಾಡಿದ ವಿಡಿಯೋ ಇಲ್ಲಿದೆ ನೋಡಿ.

ಕಲಬುರಗಿ, ಜನವರಿ 19: ಹಾಸನ-ಸೋಲಾಪುರ ಎಕ್ಸ್​ಪ್ರೆಸ್​ ರೈಲಿನಲ್ಲಿ ನೀರಿಲ್ಲದೇ ಪ್ರಯಾಣಿಕರು ಸೋಮವಾರ ಪರದಾಟ ಪಡುವಂತಾಯಿತು. ರೈಲಿನ ಸ್ಲೀಪರ್ ಕೋಚ್ ಬೋಗಿಗಳಲ್ಲಿ‌ ಬೆಳಗ್ಗೆ ನೀರು ಬಾರದೆ ನೂರಾರು ಪ್ರಯಾಣಿಕರು ತೊಂದರೆ ಅನುಭವಿಸಿದರು. ಈ ರೈಲು ಬೆಂಗಳೂರು ಮಾರ್ಗವಾಗಿ ಹಾಸನಕ್ಕೆ ಸಂಚರಿಸುತ್ತದೆ. ರೈಲಿನಲ್ಲಿ ಅವ್ಯವಸ್ಥೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಪ್ರಯಾಣಿಕರು ಆಗ್ರಹಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ದತ್ತಾತ್ರೇಯ ಪಾಟೀಲ್​

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More