AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಕ್ತಿ ಅನುಮಾಸ್ಪದ ಸಾವು: ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ, ಪೊಲೀಸರಿಗೆ ಗಾಯ

ವ್ಯಕ್ತಿ ಅನುಮಾಸ್ಪದ ಸಾವು: ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ, ಪೊಲೀಸರಿಗೆ ಗಾಯ

ಮಂಜುನಾಥ ಕೆಬಿ
| Edited By: |

Updated on: Mar 06, 2026 | 10:47 PM

Share

ಹಾಸನ ತಾಲೂಕಿನ ರಾಯಪುರದಲ್ಲಿ ಬಾರ್ ಎದುರು ನಿಲ್ಲಿಸಿದ್ದ ಕಾರಿನಲ್ಲಿ ದೊರೆಸ್ವಾಮಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ. ಸಂಬಂಧಿಕರು ಇದು ಕೊಲೆ ಎಂದು ಆರೋಪಿಸಿ, ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕಲ್ಲು ತೂರಾಟ ನಡೆದಾಗ ಪೊಲೀಸರು ಲಘು ಲಾಠಿಪ್ರಹಾರ ನಡೆಸಿದರು. ಈ ಘಟನೆಯಲ್ಲಿ ಡಿವೈಎಸ್‌ಪಿ ಸೇರಿದಂತೆ ನಾಲ್ವರು ಪೊಲೀಸರಿಗೆ ಗಾಯಗಳಾಗಿವೆ.

ಹಾಸನ, ಮಾರ್ಚ್​ 06: ಬಾರ್ ಎದುರು ಕಾರಿನೊಳಗೆ ವ್ಯಕ್ತಿ ಅನುಮಾನಾಸ್ಪದ ಸಾವನ್ನಪ್ಪಿರುವಂತಹ ಘಟನೆ ಹಾಸನ ತಾಲೂಕಿನ ರಾಯಪುರ ಬಳಿಯ ಲಕ್ಷ್ಮೀ ವೆಂಕಟೇಶ್ವರ ಬಾರ್​​​ ಬಳಿ ನಿನ್ನೆ ನಡೆದಿದೆ. ವೀರಾಪುರದ ದೊರೆಸ್ವಾಮಿ(42) ಶವ ಪತ್ತೆ ಆಗಿತ್ತು. ಬಾರ್ ಎದುರು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿರುವ ಸಂಬಂಧಿಕರು ಘಟನೆ ಖಂಡಿಸಿ ಬಾರ್ ಎದುರು ಶವವಿಟ್ಟು ಪ್ರತಿಭಟಿಸಿದ್ದಾರೆ. ರಸ್ತೆ ತಡೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ. ಈ ವೇಳೆ ಪ್ರತಿಭಟನೆ ವಿಕೋಪಕ್ಕೆ ತಿರುಗಿ ಕೆಲವರು ಕಲ್ಲು ತೂರಾಟ ಮಾಡಿದ್ದಾರೆ. ಹೀಗಾಗಿ ಲಘು ಲಾಠಿಪ್ರಹಾರ ನಡೆಸಿ ಪೊಲೀಸರು ಗುಂಪು ಚದುರಿಸಿದ್ದಾರೆ. ಈ ವೇಳೆ ಹಾಸನ ಡಿವೈಎಸ್‌ಪಿ ಗಂಗಾಧರಪ್ಪ, ಗ್ರಾಮಾಂತರ ಠಾಣೆ ಎಸ್‌ಐ ಕುಮಾರ್​, ಕಾನ್ಸ್‌ಟೇಬಲ್‌ಗಳಾದ ಜಮಾಲುದ್ದೀನ್, ಕುಮಾರ್ ಎಂಬುವವರಿಗೆ ಗಾಯಗಳಾಗಿವೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಮಂಜುನಾಥ ಕೆಬಿ
ಮಂಜುನಾಥ ಕೆಬಿ

ಮಂಜುನಾಥ ಕೆಬಿ ಪತ್ರಿಕೋದ್ಯಮದಲ್ಲಿ ಕಳೆದ 17 ವರ್ಷಗಳಿಂದ ಸೇವೆ ಮಾಡುತ್ತಿದ್ದೇನೆ. ಕರುನಾಡಿನ ಹೆಮ್ಮೆಯ ಸುದ್ದಿ ವಾಹಿನಿ ಟಿವಿ9 ಕನ್ನಡ ಜೊತೆಗೆ 15ನೇ ವರ್ಷದ ಪಯಣ ನನ್ನದು. ಓದಿದ್ದು, ಮೈಸೂರು ವಿವಿಯಲ್ಲಿ ಕಾನೂನು ಪದವಿ, ಎರಡು ವರ್ಷ ವಕೀಲ ವೃತ್ತಿ ಬಳಿಕ ಮಾಧ್ಯಮ ಕ್ಷೇತ್ರಕ್ಕೆ ಆಗಮಿಸಿ ಟಿವಿ9 ವಾಹಿನಿ ಮೂಲಕ ಸಮಸ್ಯೆಗೆ ಧ್ವನಿಯಾಗಿ ಕಾಯಕ. ಕೊಡಗಿನಲ್ಲಿ ಐದುವರೆ ವರ್ಷ ವರದಿಗಾರನಾಗಿ ಕರ್ತವ್ಯ ನಿರ್ವಹಿಸಿದ್ದು, ಇದೀಗ ಹಾಸನದ ಹಿರಿಯ ವರದಿಗಾರನಾಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದೇನೆ.

Read More