ಹಾಸನ ದುರಂತ: ಚಿಕಿತ್ಸೆ ಫಲಿಸದೇ ಮತ್ತೊಬ್ಬ ಯುವಕ ಸಾವು, ಮೃತರ ಸಂಖ್ಯೆ 10ಕ್ಕೆ ಏರಿಕೆ
ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಟ್ರಕ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಶನಿವಾರ ಸಂಜೆ ವೇಳೆಗೆ 10ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡು ಹಾಸನದ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಿವಯ್ಯನ ಕೊಪ್ಪಲು ಗ್ರಾಮದ ವಿದ್ಯಾರ್ಥಿ ಚಂದನ್ (26) ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಹಾಸನ, ಸೆಪ್ಟೆಂಬರ್ 13: ಗಣೇಶೋತ್ಸವ ಮೆರವಣಿಗೆ ವೇಳೆ ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಟ್ರಕ್ ನುಗ್ಗಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ಶಿವಯ್ಯನ ಕೊಪ್ಪಲು ಗ್ರಾಮದ ವಿದ್ಯಾರ್ಥಿ ಚಂದನ್ (26) ಚಿಕಿತ್ಸೆ ಫಲಿಸದೇ ಶನಿವಾರ ಸಂಜೆ ಸಾವಿಗೀಡಾಗಿದ್ದಾರೆ. ಇದರೊಂದಿಗೆ, ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾದಂತಾಗಿದೆ. 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸದ್ಯ ಇತರ ಗಾಯಾಳುಗಳಿಗೆ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
Latest Videos
