ಹಾಸನ ಅಪಘಾತ: 10 ಲಕ್ಷ ರೂ. ಪರಿಹಾರಕ್ಕೆ ಆಗ್ರಹಿಸಿದ ಬಿಜೆಪಿ, ಸಿಎಂ ಸಿದ್ದರಾಮಯ್ಯ ಏನಂದ್ರು ನೋಡಿ
ಹಾಸನದ ಮೊಸಳೆಹೊಸಹಳ್ಳಿಯಲ್ಲಿ ಗಣೇಶೋತ್ಸವದ ವೇಳೆ ಸಂಭವಿಸಿದ ದುರಂತ ಅಪಘಾತದಲ್ಲಿ 9 ಜನರು ಮೃತಪಟ್ಟ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿದ್ದು, ಸರ್ಕಾರದಿಂದ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ ಎಂದು ಹೇಳಿದ್ದಾರೆ. ಬಿಜೆಪಿ 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಆಗ್ರಹಿಸಿದೆ. ಕೇಂದ್ರ ಸರ್ಕಾರವು 2 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದೆ.
ಬೆಂಗಳೂರು, ಸೆಪ್ಟೆಂಬರ್ 13: ಗಣೇಶೋತ್ಸವ ಮೆರವಣಿಗೆ ವೇಳೆ ಹಾಸನದ ಮೊಸಳೆಹೊಸಹಳ್ಳಿಯಲ್ಲಿ ಸಂಭವಿಸಿದ ಭೀಕರ ಅಪಘಾತ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಆದಾಗ್ಯೂ ದುರಂತಗಳು ಸಂಭವಿಸುತ್ತಿವೆ. ಸದ್ಯ, ಹಾಸನದ ದುರಂತದಲ್ಲಿ ಮೃತಪಟ್ಟವರಿಗೆ ಗೌರವ ಸೂಚಿಸುವೆ ಎಂದರು. 5 ಲಕ್ಷ ರೂ. ಒರಿಹಾರ ಸಾಲದು, 10 ಲಕ್ಷ ರೂ. ನೀಡಬೇಕು ಎಂಬ ಪ್ರತಿಪಕ್ಷ ಬಿಜೆಪಿ ಒತ್ತಡಕ್ಕೆ ಪ್ರತಿಕ್ರಿಯಿಸಿ, ಅವರು (ಬಿಜೆಪಿ) ಈ ಹಿಂದೆ ಅಧಿಕಾರದಲ್ಲಿದ್ದಾಗ ಎಷ್ಟು ಕೊಟ್ಟಿದ್ದರು ಎಂದು ಪ್ರಶ್ನಿಸಿದರು. ನಾವು ಪರಿಹಾರ ಕೊಟ್ಟ ಮಾತ್ರಕ್ಕೆ ಅಪಘಾತದಲ್ಲಿ ಮಡಿದವರ ಜೀವ ವಾಪಸ್ ತರಲಾಗದು. ಹಾಗೆಂದು ಅವರ ಕುಟುಂಬದವರಿಗೆ ಸಾಂತ್ವನ ಹೇಳುವುದರ ಜತೆಗೆ ನೆರವಾಗುವುದಕ್ಕಾಗಿ ಪರಿಹಾರ ಕೊಡುತ್ತೇವೆ ಎಂದರು.

