ಹಾಸನ ದುರಂತ: ಹಿಮ್ಸ್ಗೆ ಹೆಚ್ಡಿ ದೇವೇಗೌಡ ಭೇಟಿ, ಜೆಡಿಎಸ್ನಿಂದ ತಲಾ 1 ಲಕ್ಷ ರೂ. ಪರಿಹಾರ ಘೋಷಣೆ
ಗಣೇಶೋತ್ಸವ ಮೆರವಣಿಗೆ ವೇಳೆ ಮೊಸಳೆ ಹೊಸಳ್ಳಿಯಲ್ಲಿ ಸಂಭವಿಸಿದ ಟ್ರಕ್ ಅಪಘಾತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರು, ಶನಿವಾರ ಹಾಸನಕ್ಕೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಅಲ್ಲದೆ, ಜತ್ಯತೀತ ಜನತಾ ದಳ ಪಕ್ಷದ ವತಿಯಿಂದ ಪರಿಹಾರ ಘೋಷಣೆ ಮಾಡಿದರು. ದೇವೇಗೌಡ
ಹಾಸನ, ಸೆಪ್ಟೆಂಬರ್ 13: ಹಾನಸದ ಮೊಸಳೆ ಹೊಸಳ್ಳಿಯಲ್ಲಿ ಗಣೇಶೋತ್ಸವ ಮೆರವಣಿಗೆ ವೇಳೆ ಟ್ರಕ್ ನುಗ್ಗಿ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಜನ ಮೃತಪಟ್ಟಿದ್ದು, ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡ ಶನಿವಾರ ಗಾಯಾಳುಗಳ ಆರೋಗ್ಯ ವಿಚಾರಿಸಿದರು. ಹಾಸನದ ಹಿಮ್ಸ್ ಆಸ್ಪತ್ರೆಗೆ ತೆರಳಿ ಗಾಯಾಳುಗಳನ್ನು ಭೇಟಿ ಮಾಡಿದರು. ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಜೆಡಿಎಸ್ ಪಕ್ಷದ ವತಿಯಿಂದ ತಲಾ 1 ಲಕ್ಷ ರೂ. ಪರಿಹಾರ ನೀಡುವುದಾಗಿ ದೇವೇಗೌಡ ಘೋಷಣೆ ಮಾಡಿದರು. ಗಂಭೀರವಾಗಿ ಗಾಯಗೊಂಡವರಿಗೆ 25 ಸಾವಿರ ರೂ., ಸ್ವಲ್ಪ ಪ್ರಮಾಣದಲ್ಲಿ ಗಾಯಗೊಂಡವರಿಗೆ 20 ಸಾವಿರ ರೂ., ಚಿಕ್ಕಪುಟ್ಟ ಗಾಯಗೊಂಡವರಿಗೆ ತಲಾ 15 ಸಾವಿರ ರೂ. ಪರಿಹಾರ ನೀಡುವುದಾಗಿ ಘೋಷಿಸಿದರು. ಸರ್ಕಾರ ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದ ದೇವೇಗೌಡ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ ಮಾಡುತ್ತೇನೆ ಎಂದರು.

