ಹಾಸನ ದುರಂತಕ್ಕೂ ಮುನ್ನ ಮತ್ತೊಂದು ಅಪಘಾತ ಮಾಡಿದ್ದ ಟ್ರಕ್ ಚಾಲಕ? ಸ್ಫೋಟಕ ಮಾಹಿತಿ ಬಹಿರಂಗ
ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಭೀಕರ ಅಪಘಾತಕ್ಕೂ ಮುನ್ನ ಟ್ರಕ್ ಚಾಲಕ ಮತ್ತೊಂದು ಅಪಘಾತ ಮಾಡಿದ್ದ ಸ್ಫೋಟಕ ಮಾಹಿತಿ ಇದೀಗ ಬಹಿರಂಗವಾಗಿದೆ. ಸ್ಥಳೀಯರ ಪ್ರಕಾರ, ಚಾಲಕನು ಮೊದಲು ಹಾಸನದ ಚನ್ನಪಟ್ಟಣ ಬೈಪಾಸ್‌ನಲ್ಲಿಯೂ ಅಪಘಾತ ಮಾಡಿ ಅಲ್ಲಿಂದ ಪರಾರಿಯಾಗಿದ್ದ. ಪೊಲೀಸರು ಈ ವಿಷಯದ ಬಗ್ಗೆ ತನಿಖೆ ಮಾಡುತ್ತಿದ್ದಾರೆ.
ಹಾಸನ, ಸೆಪ್ಟೆಂಬರ್ 13: ಹಾಸನದ ಹೊರವಲಯದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಸಂಭವಿಸಿದ ಟ್ರಕ್ ಅಪಘಾತದಲ್ಲಿ 9 ಮಂದಿ ಸಾವಿಗೀಡಾಗಿ ಹಲವು ಮಂದಿ ಗಾಯಗೊಂಡಿದ್ದಾರೆ. ಟ್ರಕ್ ಚಾಲಕನು ಚನ್ನಪಟ್ಟಣ ಬೈಪಾಸ್‌ನಲ್ಲಿಯೂ ಅಪಘಾತ ಮಾಡಿ ಮುಂದುವರಿದಿದ್ದ. ಅಲ್ಲಿ ಅಪಘಾ ಮಾಡಿ ಬಂದು ಗಣೇಶ ಮೆರವಣಿಗೆ ವೇಳೆ ಟ್ರಕ್ ನುಗ್ಗಿಸಿದ್ದಾನೆ ಎಂಬ ಸ್ಫೋಟಕ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಈ ಬಗ್ಗೆ ಸ್ಥಳೀಯರು ಆರೋಪ ಮಾಡಿದ್ದು, ಬೈಪಾಸ್‌ನಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಆಟೋ ಮತ್ತು ಬೈಕ್‌ಗಳಿಗೆ ಹಾನಿಯಾಗಿದೆ ಎನ್ನಲಾಗಿದೆ. ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ನಡೆಸಲಿ. ಆಗ ಸತ್ಯ ಗೊತ್ತಾಗಲಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಮದ್ಯಪಾನ ಮಾಡಿ ಟ್ರಕ್ ಚಲಾಯಿಸಿರುವುದು ಕೂಡ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

