ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೌರಿ ಹಬ್ಬಕ್ಕೆ ತವರಿಗೆ ಬಂದಿದ್ದ ಗೃಹಿಣಿ ಸಾವು

Edited By:

Updated on: Sep 13, 2026 | 9:10 AM

ಗೌರಿ ಗಣೇಶ ಹಬ್ಬಕ್ಕೆ ಬೆಂಗಳೂರಿನಿಂದ ಹಾಸನದ ತವರಿಗೆ ಬಂದಿದ್ದ 31 ವರ್ಷದ ಅಪರ್ಣಾ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣವಾಗಿದ್ದು, ಸ್ಕೂಟಿಯಲ್ಲಿ ಸ್ನೇಹಿತೆಯೊಂದಿಗೆ ತೆರಳುತ್ತಿದ್ದ ಅಪರ್ಣಾ ಮೇಲೆ ಬಸ್ ಹರಿದು ಹೃದಯ ವಿದ್ರಾವಕ ಘಟನೆ ಸಂಭವಿಸಿದೆ.

ಹಾಸನ, ಸೆಪ್ಟೆಂಬರ್ 13: ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 31 ವರ್ಷದ ಗೃಹಿಣಿ ಅಪರ್ಣಾ ಸಾವನ್ನಪ್ಪಿದ್ದಾರೆ. ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣವಾಗಿದೆ. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ತವರಿಗೆ ಬಂದಿದ್ದ ಅಪರ್ಣಾ, ಸ್ನೇಹಿತೆಯೊಂದಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಎನ್.ಆರ್. ವೃತ್ತದ ಬಳಿ ವೇಗವಾಗಿ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ಅಪರ್ಣಾ ಕೆಳಗೆ ಬಿದ್ದಿದ್ದು, ಅವರ ಮೇಲೆ ಬಸ್ ಹರಿದಿದೆ ಎಂದು ತಿಳಿದುಬಂದಿದೆ. ತೀವ್ರವಾಗಿ ಗಾಯಗೊಂಡಿದ್ದ ಅಪರ್ಣಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಪತಿ ಯೋಗೀಶ್ ಜೊತೆ ಬೆಂಗಳೂರಿನಲ್ಲಿ ನೆಲೆಸಿದ್ದ ಅಪರ್ಣಾ, ಗೌರಿ ಗಣೇಶ ಹಬ್ಬಕ್ಕಾಗಿ ಹಾಸನದ ದೊಡ್ಡ ಆಲದಹಳ್ಳಿಯಲ್ಲಿರುವ ತಮ್ಮ ಪೋಷಕರ ಮನೆಗೆ ಬಂದಿದ್ದರು. ಈ ಘಟನೆ ಕುಟುಂಬಸ್ಥರಲ್ಲಿ ಆಘಾತವನ್ನುಂಟು ಮಾಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us