ರೀಲ್ಸ್ ಮಾಡಲು ಹೋಗಿ ಟ್ರ್ಯಾಕ್ಟರ್ ಪಲ್ಟಿ, ಯುವಕ ಸ್ಥಳದಲ್ಲೇ ಸಾವು: ದುರಂತದ ವಿಡಿಯೋ ವೈರಲ್
ರೀಲ್ಸ್ ಹುಚ್ಚು ಯುವಕನೊಬ್ಬನ ಪ್ರಾಣವನ್ನೇ ಬಲಿಪಡೆದ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕಬ್ಬಳ್ಳಿಗೆರೆ ಗ್ರಾಮದಲ್ಲಿ ನಡೆದಿದೆ. ರೀಲ್ಸ್ಗಾಗಿ ಕಡಿದಾದ ರಸ್ತೆಯ ತಿರುವಿನಲ್ಲಿ ಟ್ರ್ಯಾಕ್ಟರ್ ಚಲಾಯಿಸುತ್ತಿದ್ದಾಗ ನಿಯಂತ್ರಣ ಸಿಗದೆ ಪಲ್ಟಿಯಾಗಿದ್ದು, ಟ್ರ್ಯಾಕ್ಟರ್ ಪಲ್ಟಿಯಾದ ರಭಸಕ್ಕೆ ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಕೊಣನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದ ಘಟನೆಯ ವಿಡಿಯೋ ಈಗ ವೈರಲ್ ಆಗುತ್ತಿದೆ.
ಹಾಸನ, ಆಗಸ್ಟ್ 21: ಯುವಕನೊಬ್ಬ ರೀಲ್ಸ್ ಮಾಡುವುದಕ್ಕೆಂದು ಕಡಿದಾದ ಇಳಿಜಾರಿನ ತಿರುವಿನಲ್ಲಿ ವೇಗವಾಗಿ ಟ್ರ್ಯಾಕ್ಟರ್ ಚಲಾಯಿಸಿದ ಪರಿಣಾಮ ಅದು ಪಲ್ಟಿಯಾಗಿ ಅದರಡಿ ಸಿಲುಕಿ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನ ಕಬ್ಬಳ್ಳಿಗೆರೆ ಗ್ರಾಮದಲ್ಲಿ ನಡೆದಿದೆ. ವಿ.ಜಿ.ಕೊಪ್ಪಲು ಗ್ರಾಮದ ಕಿರಣ್ (19) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಸದ್ಯ, ಟ್ರ್ಯಾಕ್ಟರ್ ಪಲ್ಟಿಯ ವಿಡಿಯೋ ವೈರಲ್ ಆಗುತ್ತಿದೆ.