Video: ಹಾಸನ: ಮರಿಯಾನೆ ಸೇರಿ 25ಕ್ಕೂ ಹೆಚ್ಚು ಕಾಡಾನೆಗಳಿಂದ ದಾಂದಲೆ: ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

| Updated By: ಗಂಗಾಧರ​ ಬ. ಸಾಬೋಜಿ

Updated on: Nov 18, 2023 | 6:01 PM

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಕಾಫಿ, ಬಾಳೆ, ಅಡಕೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಕಾಡಾನೆಗಳ ದಾಂದಲೆಯಿಂದ ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ. ಮರಿಯಾನೆ ಸೇರಿ 25ಕ್ಕೂ ಹೆಚ್ಚು ಕಾಡಾನೆಗಳಿಂದ ದಾಂದಲೆ ಮಾಡಲಾಗಿದೆ.

ಹಾಸನ, ನವೆಂಬರ್​ 18: ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ಕಾಡಾನೆಗಳ (elephant) ಉಪಟಳ ಹೆಚ್ಚಾಗಿದ್ದು, ಕಾಫಿ, ಬಾಳೆ, ಅಡಕೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಕಾಡಾನೆಗಳ ದಾಂದಲೆಯಿಂದ ಕಾಫಿ ಬೆಳೆಗಾರರು ಕಂಗಾಲಾಗಿದ್ದಾರೆ. ಮರಿಯಾನೆ ಸೇರಿ 25ಕ್ಕೂ ಹೆಚ್ಚು ಕಾಡಾನೆಗಳಿಂದ ದಾಂದಲೆ ಮಾಡಲಾಗಿದೆ. ಕಾಡಾನೆಗಳ ಹಾವಳಿಯಿಂದ ಸ್ಥಳೀಯರು ಆತಂಕಗೊಂಡಿದ್ದು, ಕಾಡಾನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. ಕಾಡಾನೆಗಳ ಉಪಟಳದಿಂದ ಕಾಫಿ ತೋಟದ ಕೆಲಸಕ್ಕೆ ಕಾರ್ಮಿಕರು ಬರಲು ಹಿಂದೇಟು ಹಾಕುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.