ಹಾಸನ ಟ್ರಕ್ ದುರಂತ: ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿ ಮರೆತ ಸರ್ಕಾರ
ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು 10 ಜನರ ಸಾವನ್ನಪ್ಪಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಇನ್ನು ಕೆಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಸರ್ಕಾರ ಘೋಷಿಸಿದೆ. ಆದ್ರೆ, ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿ ಸರ್ಕಾರ ಮೈಮರೆತಿದೆ.
ಹಾಸನ, (ಸೆಪ್ಟೆಂಬರ್ 15): ಹಾಸನದ ಮೊಸಳೆ ಹೊಸಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಕ್ಯಾಂಟರ್ ಹರಿದು 10 ಜನರ ಸಾವನ್ನಪ್ಪಿದ್ದು, ಗ್ರಾಮದಲ್ಲಿ ನೀರವ ಮೌನ ಆವರಿಸಿದೆ. ಇನ್ನು ಕೆಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸುವುದಾಗಿ ಸರ್ಕಾರ ಘೋಷಿಸಿದೆ. ಆದ್ರೆ, ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುವುದಾಗಿ ಹೇಳಿ ಸರ್ಕಾರ ಮೈಮರೆತಿದೆ.
ಹೌದು..ಹಾಸನ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಆದರ್ಶ್, ಋತ್ವಿಕ್ ಕುಟುಂಬಸ್ಥರು ತಮ್ಮ ಕೈಯಲ್ಲಿದ್ದ ಹಣದಲ್ಲಿ ಇದುವರೆಗೆ ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ, ಖಾಸಗಿ ಆಸ್ಪತ್ರೆಯಲ್ಲಿ ಈಗಾಗಲೇ ಲಕ್ಷಾಂತರ ರೂ. ಬಿಲ್ ಆಗಿದ್ದು, ಕನಿಷ್ಠ ಅರ್ಧದಷ್ಟು ಹಣವನ್ನಾದರೂ ಕಟ್ಟಬೇಕೆಂದು ಆಸ್ಪತ್ರೆಯವರು ಹೇಳಿದ್ದಾರೆ. ಮತ್ತೊಂದೆಡೆ ರಾಜ್ಯ ಸರ್ಕಾರವೂ ಸಹ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರ ಬಗ್ಗೆ ಈವರೆಗೆ ಕ್ರಮ ಕೈಗೊಂಡಿಲ್ಲ. ಇದರಿಂದ ಗಾಯಾಳುಗಳ ಕುಟುಂಬಸ್ಥರು ಹಣವಿಲ್ಲದೇ ಕಂಗಾಲಾಗಿದ್ದಾರೆ. ಚಿಕಿತ್ಸೆ ಕೊಡಿಸಲಾಗದೆ ಬೇರೆಡೆ ಕರೆದೊಯ್ಯಲೂ ಆಗದೆ ಪೋಷಕರು ಒದ್ದಾಡುತ್ತಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಕೊಟ್ಟ ಮಾತಿನಂತೆ ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸುವ ಬಗ್ಗೆ ಕ್ರಮವಹಿಸಬೇಕಿದೆ.

