ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ: ಇಲ್ಲಿದೆ ರೋಚಕ ಕಾರ್ಯಾಚರಣೆ ವಿಡಿಯೋ
ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಬಳಿ ನಡೆದ ನಾಲ್ಕು ಗಂಟೆಗಳ ಕಾರ್ಯಾಚರಣೆಯಲ್ಲಿ ಕಾಡಾನೆಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟು ಒಂಟಿ ಕಾಡಾನೆಯನ್ನು ಸೆರೆ ಹಿಡಿದರು. ಅರವಳಿಕೆ ಮದ್ದನ್ನು ಬಳಸಿ ಕಾಡಾನೆಯನ್ನು ನಿಶ್ಚೇಷ್ಟಿತಗೊಳಿಸಿ, ಸಾಕಾನೆಗಳ ಸಹಾಯದಿಂದ ಸೆರೆಹಿಡಿಯಲಾಯಿತು.
ಹಾಸನ, ಮಾರ್ಚ್ 16: ಜಿಲ್ಲೆಯಲ್ಲಿ ಮೊದಲ ದಿನದ ಕಾಡಾನೆ (Elephant) ಸೆರೆ ಕಾರ್ಯಾಚರಣೆ ಮಾಡಲಾಗಿದ್ದು, ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ನಂತರ ಒಂಟಿಸಲಗವನ್ನು ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಬಳಿಯ ಎಸ್ಟೇಟ್ನನಲ್ಲಿ ಸೆರೆ ಹಿಡಿಯಲಾಗಿದೆ. ಅರವಳಿಕೆ ಮದ್ದು ನೀಡಿ ಅರಣ್ಯ ಸಿಬ್ಬಂದಿ ಕಾಡಾನೆ ಸೆರೆ ಹಿಡಿದಿದ್ದಾರೆ. ಕ್ಯಾಪ್ಟನ್ ಪ್ರಶಾಂತ್ ನೇತೃತ್ವದಲ್ಲಿ ನಡೆದ ಕಾಡಾನೆ ಸೆರೆ ಯಶಸ್ವಿ ಆಗಿದೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos

ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್ಕೆ ಪಾಟೀಲ್

Krunal Pandya: 9 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕೃನಾಲ್ ಪಾಂಡ್ಯ

‘ಬಾಯ್ಸ್ vs ಗರ್ಲ್ಸ್’ನಲ್ಲಿ ಹೆಚ್ಚು ವೋಟ್ ಬಿದ್ದಿದ್ದು ಯಾರಿಗೆ?

VIDEO: ಏಟಿಗೆ ಎದಿರೇಟು... ಆಕ್ರೋಶಭರಿತರಾಗಿ ಸಂಭ್ರಮಿಸಿದ ವಿರಾಟ್ ಕೊಹ್ಲಿ
