Loading video

ಸತತ ನಾಲ್ಕು ಗಂಟೆಗಳ ಬಳಿಕ ಕಾಡಾನೆ ಸೆರೆ: ಇಲ್ಲಿದೆ ರೋಚಕ ಕಾರ್ಯಾಚರಣೆ ವಿಡಿಯೋ

| Updated By: ಗಂಗಾಧರ​ ಬ. ಸಾಬೋಜಿ

Updated on: Mar 16, 2025 | 3:54 PM

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಬಳಿ ನಡೆದ ನಾಲ್ಕು ಗಂಟೆಗಳ ಕಾರ್ಯಾಚರಣೆಯಲ್ಲಿ ಕಾಡಾನೆಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟು ಒಂಟಿ ಕಾಡಾನೆಯನ್ನು ಸೆರೆ ಹಿಡಿದರು. ಅರವಳಿಕೆ ಮದ್ದನ್ನು ಬಳಸಿ ಕಾಡಾನೆಯನ್ನು ನಿಶ್ಚೇಷ್ಟಿತಗೊಳಿಸಿ, ಸಾಕಾನೆಗಳ ಸಹಾಯದಿಂದ ಸೆರೆಹಿಡಿಯಲಾಯಿತು.

ಹಾಸನ, ಮಾರ್ಚ್​ 16: ಜಿಲ್ಲೆಯಲ್ಲಿ ಮೊದಲ‌ ದಿನದ ಕಾಡಾನೆ (Elephant) ಸೆರೆ ಕಾರ್ಯಾಚರಣೆ ಮಾಡಲಾಗಿದ್ದು, ಸತತ ನಾಲ್ಕು ಗಂಟೆಗಳ ಕಾರ್ಯಾಚರಣೆ ನಂತರ ಒಂಟಿಸಲಗವನ್ನು ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಬಳಿಯ ಎಸ್ಟೇಟ್​​ನನಲ್ಲಿ ಸೆರೆ ಹಿಡಿಯಲಾಗಿದೆ. ಅರವಳಿಕೆ ಮದ್ದು ನೀಡಿ ಅರಣ್ಯ ಸಿಬ್ಬಂದಿ ಕಾಡಾನೆ ಸೆರೆ ಹಿಡಿದಿದ್ದಾರೆ. ಕ್ಯಾಪ್ಟನ್ ಪ್ರಶಾಂತ್ ನೇತೃತ್ವದಲ್ಲಿ ನಡೆದ ಕಾಡಾನೆ ಸೆರೆ ಯಶಸ್ವಿ ಆಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.